ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬುಧವಾರ ಸಂಜೆ ಬಲೆ ಹಾಕಿ ಮೀನು ಹಿಡಿಯಲು ಮೀನುಗಾರಿಕೆಗೆ ಹೋಗಿದ್ದ ಮನೋಹರ್ ಪುತ್ರನ್ (53) ಎಂಬವರು ಆಯತಪ್ಪಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಬೀಸಣಿಗೆ ಬಲೆ ಹಾಕಿ ಮೀನು ಹಿಡಿಯಲು ಒಬ್ಬರೇ ಹೋಗಿದ್ದರು. ಅಳಿವೆ ಬಾಗಿಲಿನಲ್ಲಿ ಅಲೆಗಳ ರಭಸಕ್ಕೆ ಆಯತಪ್ಪಿ ನದಿಗೆ ಬಿದ್ದಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಮೃತರು, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.