ಜಿಲ್ಲೆ

ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐದು ಜೋಡಿ

Gadag - Desk - Tippanna Avadoot

ಉಪ್ಪಿನಬೆಟಗೇರಿ: ಗ್ರಾಮದ ವಿರೂಪಾಕ್ಷೇಶ್ವರ ಜಾತ್ರೆ ಅಂಗವಾಗಿ ದೇವಸ್ಥಾನದ ಆವರಣದ ಶನಿವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹದಲ್ಲಿ ಐದು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕುಂದಗೋಳ ಕಲ್ಯಾಣಪುರ ಮಠದ ಶ್ರೀ ಬಸವಣ್ಣಜ್ಜನವರು, ಮಮದಾಪುರದ ಮುರುಘೕಂದ್ರ ಸ್ವಾಮೀಜಿ, ಸ್ಥಳೀಯ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಆಶೀರ್ವಚನ ನೀಡಿದರು. ಗುರುರಾಜ ಹುಣಸಿಮರದ, ಬಸವರೆಡ್ಡಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಬಸವರೆಡ್ಡಿ, ಮಾಜಿ ಶಾಸಕಿ ಸೀಮಾ ಮಸೂತಿ, ಸವಿತಾ ಅಮರಶೆಟ್ಟಿ, ಹೊಳೆಬಸನಗೌಡ ದೇಸಾಯಿ, ಚಂದ್ರಶೇಖರ ಜುಟ್ಟಲ್ ಇತರರಿದ್ದರು.