ಐದು ದಿನಗಳ ಉದ್ಯಮಶೀಲತಾ ತರಬೇತಿ 
ಜಿಲ್ಲೆ

ಐದು ದಿನಗಳ ಉದ್ಯಮಶೀಲತಾ ತರಬೇತಿ ಸಮರೋಪ *ಮಹಿಳಾ ಉದ್ಯಮಿಯರಾಗಿ ಇತರರಿಗೆ ಉದ್ಯೋಗ ನೀಡಿ; ಕುಲಪತಿ

ರಾಯಚೂರು ಮಹಿಳೆಯರಿಗಾಗಿ ಇರುವ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದು, ಮಹಿಳಾ ಉದ್ಯಮಿಯರಾಗಿ, ಉದ್ಯೋಗ ನೀಡಿ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮAತಪ್ಪ ಅವರು ಹೇಳಿದರು.

ನಗರದ ಕೃಷಿ ವಿವಿಯ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ರಾಷ್ಟಿçÃಯ ಜೀವನೋಪಾಯ ಅಭಿಯಾನದ ಸ್ವ-ಸಹಾಯ ಸಂಘದ ಸದಸ್ಯರಿಗೆ ಸಂಕಲ್ಪ ಯೋಜನೆಯಡಿ ಐದು ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮದ ಸಮರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಮನೆ ನಿರ್ವಹಣೆ ಹಾಗೂ ಕೃಷಿ ಮತ್ತು ಕೃಷಿಯೇತರ ಅವಲಂಬಿತ ಕ್ಷೇತ್ರದಲ್ಲಿ ಮಹಿಳೆಯರು ಪಾತ್ರ ಬಹಳ ಇದೆ. ಮಹಿಳೆಯರು ಸ್ವಂತ ಉದ್ಯೋಗ ಪ್ರಾರಂಭಿಸಬೇಕು. ನಿಮ್ಮ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ಉತ್ತಮ ಉದ್ಯಮದಾರರಾಗಬೇಕು ಎಂದರು.

ಸಿಡಾಕï ಜಂಟಿ ನಿರ್ದೇಶಕರಾದ ಜಿ.ಯು.ಹುಡೇದï ಅವರು ಮಾತನಾಡಿ, ಸಮುದಾಯ ಮತ್ತು ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ಮಹಿಳೆಯರು ಸ್ವ-ಉದ್ಯೋಗವನ್ನು ಕೈಗೊಳ್ಳಬೇಕು. ಸಂಸಾರವನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬ ಮಹಿಳೆಯ ಮೇಲಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮುಕ್ತವಾಗಿ ಮುನ್ನಡೆದುಕೊಂಡು ಹೋಗುವ ಅವಕಾಶ ಇದೆ ಎಂದರು.

ಈ ಸಂದರ್ಭದಲ್ಲಿ ಕೃಷಿ ವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಮುಖ್ಯಸ್ಥರಾದ ಡಾ.ಬಸವಣ್ಣಪ್ಪ ಸಂಪನ್ಮೂಲ ವ್ಯಕ್ತಿ ಗೌರಮ್ಮ, ಡೇ-ನಲ್ಮï ವ್ಯವಸ್ಥಾಪಕರಾದ ರಸೂಲï ಸಾಬï, ಸಿಡಕï ನಾಗರಾಜï ಸೇರಿದಂತೆ ಇತರರು ಇದ್ದರು.