ಮೈಸೂರು: ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ವರುಣ ಠಾಣಾ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದು, 3,630 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಕೀಳನಪುರದ ಡಾ.ಅಂಬೇಡ್ಕರ್ ಭವನದದ ಮುಂಭಾಗದ ಖಾಲಿ ನಿವೇಶನದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ವಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.