ಜಿಲ್ಲೆ

ಮಂಗಳೂರಿನಲ್ಲಿ ನೈತಿಕ ಪೊಲೀಸ್​ಗಿರಿ; ಐವರು ಆರೋಪಿಗಳು ಅರೆಸ್ಟ್​

Webdesk - Manjunatha B

ದಕ್ಷಿಣ ಕನ್ನಡ: ಅನ್ಯಕೋಮಿನ ವಿದ್ಯಾರ್ಥಿನಿಯರ ಜೊತೆ ವಿಹಾರಕ್ಕೆಂದು ಬಂದಿರುವುದನ್ನು ಪ್ರಶ್ನಿಸಿ ಮೂವರು ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹೆಲ್ಲೆ ನಡೆಸಿರುವ ಘಟನೆ ಮಂಗಳೂರಿನ ಸೋಮೇಶ್ವರ್​ ಬೀಚ್​ನಲ್ಲಿ ನಡೆದಿದೆ.

ಪ್ರಕರಣ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ಧಾರೆ. ಬಂಧಿತರು ಹಿಂದೂ ಸಂಘಟನೆಗೆ ಸೇರಿದವರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಪ್ರಕರಣದ ಹಿನ್ನಲೆ

ಕೇರಳ ಮೂಲದ ಆರು ವಿದ್ಯಾರ್ಥಿಗಳು ವಿಹಾರಕ್ಕೆಂದು ಮಂಗಳೂರಿನ ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಇವರಲ್ಲಿ ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ಗಮನಿಸಿದ ಗುಂಪು ಮೊದಲಿಗೆ ಅವರನ್ನು ಹಿಂಬಾಲಿಸಲು ಶುರು ಮಾಡಿದೆ.

ವಿಹಾರ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ತಂಡ ದಾಳಿ ಮಾಡಿ ಹಲ್ಲೆ ನಡೆಸಿದೆ. ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ಘಟನೆಯ ನಂತರ ವಾಪಸ್​ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯರು ದೇರಳಕಟ್ಟೆ ಅಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಆರೋಪಿಗಳು ಅರೆಸ್ಟ್​

ಈ ಕುರಿತು ಪ್ರತಿಕ್ರಿಯಿಸಿರುವ ನಗರ ಪೊಲೀಸ್​ ಆಯುಕ್ತ ಕುಮಾರ್​ ಜೈನ್​ ಕೇರಳ ಮೂಲದ ಆರು ವಿದ್ಯಾರ್ಥಿಗಳು ಸೋಮೇಶ್ವರ್​ ಬೀಚ್​ಗೆ ವಿಹಾರಕ್ಕೆ ಬಂದ ಸಮಯದಲ್ಲಿ ಆರೋಪಿಗಳು ಅವರ ಮೇಲೆ ಅನ್ಯ ಕೋಮಿನವರೊಂದಿಗೆ ಬಂದಿದ್ದೀರಾ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿಯನ್ನು ಆಧರಿಸಿ ಉಳ್ಳಾಲದ ಬಸ್ತಿಪಡ್ಪು ನಿವಾಸಿ ಯತೀಶ್(48), ಉಚ್ಚಿಲ ನಿವಾಸಿ ಸಚಿನ್(23), ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್(19) ಸೇರಿದಂತೆ ಓರ್ವ ಅಪ್ರಾಪ್ತ ವಯಸ್ಸಿನ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನುಳಿದ ಆರೋಪಿಗಳು ತಲೆಮಾರಿಸಿಕೊಂಡಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಈ ಸಂಬಂಧ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್​ ಆಯುಕ್ತ ಕುಮಾರ್​ ಜೈನ್ ಮಾಹಿತಿ ನೀಡಿದ್ದಾರೆ.