ವಿರಾಜಪೇಟೆ: ಉಡುಪಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ರಜತಾದ್ರಿ ಮಣಿಪಾಲ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ಮತ್ತು ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರು ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ 17 ವರ್ಷ ವಯೋಮಾನದ ಬಾಲಕಿಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗು ಬಾಲಕಿಯರ ತಂಡವು ದ್ವಿತೀಯ ಸ್ಥಾನ ಗಳಿಸಿತು.
ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ವಿರಾಜಪೇಟೆಯ ಪ್ರಗತಿ ಪ್ರೌಢಶಾಲೆಯ ಧ್ವಾನಿ ಬಿ.ಆರ್, ಝಕರಿಯ ಸೆಫಿನ್ ವಿ.ಯು, ಸಾನ್ವಿ ಎಸ್.ಭಟ್, ಗನ್ಯಶ್ರೀ ಎಂ.ಜಿ ಹಾಗೂ ಎನ್.ಎಸ್.ವಿನ್ಯಾ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕೋಲಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರಗತಿಯ ಶಾಲೆಯ ವಿದ್ಯಾರ್ಥಿನಿಯರು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ಪ್ರಗತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಮಾದಂಡ ತಿಮ್ಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.