ರಾಯಚೂರು: ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಸ್ಕೀಂ ನೌಕರರಿಗೆ ಕನಿಷ್ಠ ವೇತನ ಹಾಗೂ ನಿವೃತ್ತಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಯಕರ್ತೆಯರು ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಸಾರ್ವಜನಿಕ ಉದ್ಯಾನವನದಿಂದ ಟಿಪ್ಪು ಸುಲ್ತಾನ್ ಉದ್ಯಾನವನದವರೆಗೆ ಮೆರವಣಿಗೆ ಮೂಲಕ ಆಗಮಿಸಿ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿ ಇರುವ ಯೋಜನೆಗಳನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ, ಬಿಸಿಯೂಟ ಮತ್ತು ಆಶಾ ಕಾರ್ಯಕರ್ತೆಯರಿಗೆ 2018ರಿಂದ ವೇತನ ಹೆಚ್ಚಳ ಮಾಡಲಾಗಿಲ್ಲ. ಆದರೆ ಚುನಾವಣೆ, ಸರ್ವೇ ಸೇರಿದಂತೆ ಎಲ್ಲ ಕಾರ್ಯಗಳಿಗೂ ದುಡಿಸಿಕೊಳ್ಳುತ್ತಿದ್ದು, ಯಾವುದೇ ರೀತಿಯ ಸೌಲಭ್ಯಗಳನ್ನು ನೀಡುತ್ತಿಲ್ಲ.
ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲು ಕಾನೂನು ರಚಿಸಬೇಕು. ಯೋಜನೆಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಒಳಗುತ್ತಿಗೆ, ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು.
ಅಂಗನವಾಡಿ, ಆಶಾ, ಬಿಸಿಯೂಟ ನೌಕರರಿಗೆ 31 ಸಾವಿರ ಕನಿಷ್ಠ ವೇತನ ಹಾಗೂ ನಿವೃತ್ತಿ ನಂತರ 10 ಸಾವಿರ ರೂ. ಪಿಂಚಣಿ ನೀಡಬೇಕು. ಬಿಸಿಯೂಟ ನೌಕರರಿಗೆ ಪರಿಹಾರ ನೀಡದೆ ನಿವೃತ್ತಿ ಮಾಡಬಾರದು. ಅಕ್ಷರ ದಾಸೋಹ ಯೋಜನೆಯನ್ನು ಶಿಕ್ಷಣ ಇಲಾಖೆಯಿಂದ ನಡೆಸಬೇಕು.
ಬೇರೆ ಇಲಾಖೇತರ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. 29 ಕಾರ್ಮಿಕ ಸಂಹಿತೆಗಳನ್ನು ಕೈಬಿಟ್ಟು ಕಾರ್ಮಿಕ ಪರವಾದ ನೀತಿಗಳನ್ನು ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಪದಾಕಾರಿಗಳಾದ ರಂಗಮ್ಮ, ವರಲಕ್ಷ್ಮಿ, ಡಿ.ಎಸ್.ಶರಣಬಸವ, ರೇಣುಕಮ್ಮ, ಶಬ್ಬೀರ್, ಮರಿಯಮ್ಮ, ಮಹ್ಮದ್ ಅನ್ೀ, ರಮಾದೇವಿ, ಶರ್ುದ್ದೀನ್, ನರ್ಮದಾ, ಸರಸ್ವತಿ, ಶ್ರೀಲೇಖ, ಜರೀನಾ ಬೇಗಂ, ವಿಶಾಲಾಕ್ಷಮ್ಮ ಪಾಲ್ಗೊಂಡಿದ್ದರು.