ಹೆಬ್ರಿ: ಕ್ರೀಡೆಗಳು ವಿದ್ಯಾರ್ಥಿಗಳಿಗೆ ದೈಹಿಕ, ಮಾನಸಿಕತೆ ತಂದುಕೊಡುತ್ತದೆ. ಸಾಧನೆ ಹಿಂದೆ ನಿಶ್ಚಲವಾದ ಛಲವಿದ್ದರೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟದವರೆಗೂ ಕೀರ್ತಿ ಹಬ್ಬಿಸಬಹುದು ಎಂದು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಅಧ್ಯಕ್ಷ ಪಾಂಡುರಂಗ ಪೈ ಹೇಳಿದರು.
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ 17ನೇ ವರ್ಷದ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರೆವೇರಿಸಿದರು.
ಅಮೃತ ಭಾರತಿ ಶಾಲೆ ವಿದ್ಯಾರ್ಥಿಗಳಿಗೆ ಸಂಸ್ಕಾರಯುತವಾದ ಬೆಳವಣಿಗೆಗೆ ಪೂರಕವಾದ ಭಾರತೀಯ ಸಂಸ್ಕೃತಿಯ ಶಿಕ್ಷಣ ನೀಡುತ್ತಿದೆ ಎಂದು ಕ್ರೀಡಾಪಟು ಪ್ರಶಾಂತ ಪೈ ಹೇಳಿದರು.
ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶೆಣೈ, ಗೌರವಾಧ್ಯಕ್ಷ ಯೋಗೀಶ್ ಭಟ್, ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ವಸತಿ ನಿಲಯ ಸದಸ್ಯ ರಾಮಕೃಷ್ಣ ಆಚಾರ್ಯ, ಸದಸ್ಯರಾದ ಬಾಲಕೃಷ್ಣ ಮಲ್ಯ, ಲಕ್ಷ್ಮಣ್ ಭಟ್ ಶಿವಪುರ, ಕ್ರೀಡಾಕೂಟ ಪ್ರಮುಖ್ ಉಷಾ ಶೆಟ್ಟಿ ಸಿದ್ದಾಪುರ, ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಪ್ರಾಂಶುಪಾಲ ಅರುಣ್ ಎಚ್.ವೈ, ಅನಿತಾ ಉಪಸ್ಥಿತರಿದ್ದರು. ಜಿಲ್ಲಾ ಶಾರೀರಿಕ ಪ್ರಮುಖ್ ವಿಜಯ ಕುಮಾರ್ ಶೆಟ್ಟಿ ನಿರೂಪಿಸಿದರು.