ಮಹಾರಾಷ್ಟ್ರದ ಜತ್ತ ತಾಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ 78ನೇ ಸ್ವಾತಂತ್ರ್ಯ ದಿನೋತ್ಸವ ಆಚರಿಸಲಾಯಿತು. ಸಮಿತಿ ಅಧ್ಯಕ್ಷ ವಿಜುಗೌಡ ಪಾಟೀಲ ಮತ್ತಿತರರಿದ್ದಾರೆ.  
ಜಿಲ್ಲೆ

ಗುಡ್ಡಾಪುರ ದಾನಮ್ಮ ದೇವಸ್ಥಾನದಲ್ಲಿ ವಿಜುಗೌಡ ಪಾಟೀಲರಿಂದ ಧ್ವಜಾರೋಹಣ

ವಿಜಯಪುರ: ಮಹಾರಾಷ್ಟ್ರದ ಜತ್ತ ತಾಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ 78ನೇ ಸ್ವಾತಂತ್ರ್ಯ ದಿನೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.

ಗುರುವಾರ ದೇವಸ್ಥಾನದ ಆವರಣದಲ್ಲಿ ಸಮಿತಿ ಅಧ್ಯಕ್ಷ ವಿಜುಗೌಡ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡುತ್ತಾ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬರಲು ಸಾಕಷ್ಟು ಜನ ತ್ಯಾಗ ಬಲಿದಾನ ಮಾಡಿದ್ದಾರೆ. ಅವರು ಕಷ್ಟಪಟ್ಟು ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನ ಮೇಲಿದೆ ಎಂದರು.

ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಶಾಲೆಯ ಮುಖ್ಯ ಗುರುಗಳು, ಪೂಜಾರಿಗಳು ಇದ್ದರು.