ಜಿಲ್ಲೆ

ರಾಜ್ಯದಲ್ಲಿ ಸುಸ್ಥಿರ ಅರ್ಥ ವ್ಯವಸ್ಥೆ: ಸಚಿವೆ  ಲಕ್ಷ್ಮಿ ಹೆಬ್ಬಾಳ್ಕರ್

ಗೋಪಾಲಕೃಷ್ಣ ಪಾದೂರ್

ಉಡುಪಿ: ರಾಜ್ಯ ಸರ್ಕಾರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ಕಾರ್ಯಕ್ಷಮತೆಯನ್ನು ತೋರಿಸಿದೆ. ಜಿ.ಎಸ್​.ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿರುವುದು ರಾಜ್ಯದ ಅರ್ಥ ವ್ಯವಸ್ಥೆ ಸುಸ್ಥಿರವಾಗಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳಕರ್​ ಹೇಳಿದರು.

ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ ಅವರು ಸಂದೇಶ ನೀಡಿದರು.

ಪಂಚಾಯತ್​ ವಿಕೇಂದ್ರೀಕರಣ ಕುರಿತು ದೇಶದ ಎಲ್ಲ ರಾಜ್ಯಗಳಲ್ಲಿ ನಡೆಸಿರುವ ಅಧ್ಯಯನ ವರದಿಯನ್ನು ಕೇಂದ್ರದ ಪಂಚಾಯತ್​ ರಾಜ್​ ಸಚಿವಾಲಯ ಬಿಡುಗಡೆಗೊಳಿಸಿದ್ದು, ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. 2024 &25 ನೇ ಆರ್ಥಿಕ ವರ್ಷದಲ್ಲಿ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ನಕ್ಸಲಿಸಂನಂತಹ ಸವಾಲನ್ನು ಹತ್ತಿಕ್ಕಲು ಅಗತ್ಯವಿರುವ ಎಲ್ಲಾ ಕಾನೂನಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಮುದಾಯ ಪೊಲೀಸ್​ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮನೆ ಮನೆಗೆ ಪೊಲೀಸ್​ ಸೇವೆ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹಕ್ಕಾಗಿ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿಮಾರ್ಣ ಕಾರ್ಮಿಕರ ಕಲ್ಯಾಣ ಮಂಡಳಿಯು 100 ಹೈಟೆಕ್​ ಸಂಚಾರಿ ಆರೋಗ್ಯ ಘಟಕಗಳನ್ನು ಒಟ್ಟು 129 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಿ, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸೇವೆಯನ್ನು ಒದಗಿಸಿದೆ. ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿರುವ ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡಲು ಸರ್ಕಾರವು ಹೈಟೆಕ್​ ಸಂಚಾರಿ ಆರೋಗ್ಯ ಘಟಕ ಲೋಕಾರ್ಪಣೆಗೊಳಿಸಿದೆ. ಎಲ್ಲಾ ಮಾಸಿಕ ಪಿಂಚಣಿ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವುದರೊಂದಿಗೆ ಪ್ರತಿ ಮಾಹೆ ರಾಜ್ಯದಲ್ಲಿ ಅಂದಾಜು 82.57 ಲಕ್ಷ ಫಲಾನುಭವಿಗಳಿಗೆ ಆಧಾರ್​ ಆಧಾರಿತ ಪಿಂಚಣಿ ವ್ಯವಸ್ಥೆ ಯೋಜನೆಯಡಿ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ ಎಂದರು.

ಗೃಹಲಕ್ಷಿ$್ಮ ಯೋಜನೆಯಲ್ಲಿ 870 ಕೋಟಿ ರೂ.

ಪ್ರತಿಯೊಬ್ಬ ನಾಗರಿಕನೂ ಸಮಾಜದಲ್ಲಿ ಆತ್ಮ ಗೌರವದಿಂದ ಬಾಳಲು ಪಂಚಗ್ಯಾರೆಂಟಿ ಯೋಜನೆ ಆಸರೆಯಾಗಿದೆ. ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ 1.23 ಕೋಟಿ ಫಲಾನುಭವಿಗಳಿಗೆ ಈವರೆಗೆ 47,400 ಕೋಟಿ ರೂ. ಜಮಾ ಮಾಡಲಾಗಿದೆ. ಜಿಲ್ಲೆಯಲ್ಲಿ 2,25,131 ಫಲಾನುಭವಿಗಳಿಗೆ 870.83 ಕೋಟಿ ರೂ. ಹಣ ಸಂದಾಯ ಮಾಡಲಾಗಿದೆ. ಅಕ್ಕ ಕೋ&-ಆಪರೇಟಿವ್​ ಸೊಸೈಟಿಗಳನ್ನು ಸ್ಥಾಪಿಸುವ ಮೂಲಕ ಗೃಹಲಕ್ಷಿ$್ಮ ಯೋಜನೆಯ ಫಲಾನುಭವಿಗಳನ್ನು ಸದಸ್ಯರನ್ನಾಗಿಸಲಾಗುತ್ತಿದೆ. ಇಂದಿರಾ ಕ್ಯಾಂಟೀನ್​ ಮತ್ತು ಜಿಲ್ಲಾ ಹಾಗೂ ತಾಲೂಕು ಕಚೇರಿಯ ಆವರಣದಲ್ಲಿ ಪ್ರಾಯೋಗಿಕವಾಗಿ 10 ನಗರಗಳಲ್ಲಿ ಸ್ವ-ಸಹಾಯ ಸಂಘಗಳ ಮೂಲಕ ಅಕ್ಕ ಕೆಫೆ ನಿರ್ವಹಣೆಗೆ ಚಾಲನೆ ನೀಡಲಾಗಿದೆ. ಹಲವು ವರ್ಷಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ನೆಲೆಗೊಂಡಿರುವ ದಾಖಲೆ ರಹಿತ ಜನವಸತಿ ಪ್ರದೇಶಗಳಾದ ತಾಂಡ, ಹಟ್ಟಿ, ಹಾಡಿ, ಪಾಳ್ಯ, ಕ್ಯಾಂಪ್​, ಕಾಲೋನಿ ಇತ್ಯಾದಿ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದೆ.

ಅಂಗನವಾಡಿಗಳಲ್ಲಿ ಎಲ್​ ಕೆ ಜಿ

ಅಂಗನವಾಡಿಗಳಲ್ಲಿ ಎಲ್​.ಕೆ.ಜಿ, ಯು.ಕೆ.ಜಿ ತರಗತಿ ನಡೆಸಲು 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದ್ದು, 4 ರಿಂದ 5 ಸಾವಿರ ಅಂಗನವಾಡಿಗಳಲ್ಲಿ ಸದ್ಯದಲ್ಲಿಯೇ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದರು.

ವಾಡಿಕೆಗಿಂತ ಶೇ. 30ರಷ್ಟು ಹೆಚ್ಚು ಮಳೆ

ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಶೇ. 30 ರಷ್ಟು ಹೆಚ್ಚುವರಿ ಮಳೆಯಿಂದಾಗಿ ಮಾನವ ಜೀವ ಹಾನಿ, ವಾಸ್ತವ್ಯ ಮನೆ ಹಾನಿ ಮತ್ತಿತರ ಹಾನಿಗಳಾಗಿವೆ. ಈವರೆಗೆ 1.14 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. ಪೂರ್ವ ಮುಂಗಾರು ಮಳೆಯಿಂದ 31.63 ಹೆಕ್ಟೇರ್​ ಬೆಳೆಹಾನಿಗೆ ಪರಿಹಾರ ಪಾವತಿಸಲು ಕ್ರಮ ವಹಿಸಲಾಗಿದೆ. ಭೂ ಕುಸಿತ ತಡೆಗೆ ಶಾಶ್ವತ ತಡೆಗೋಡೆ ನಿಮಾರ್ಣಕ್ಕೆ ಎನ್​.ಡಿ.ಆರ್​.ಎಫ್​ ಮಿಟಿಗೇಶನ್​ ಯೋಜನೆಯಡಿ 30 ಕೋಟಿ ರೂ. ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.

ಬಂದರು ಅಭಿವೃದ್ಧಿ

ಬೈಂದೂರಿನ ಮರವಂತೆಯಲ್ಲಿ ಹೊರಬಂದರು ವಿಸ್ತರಣಾ ಕಾಮಗಾರಿಗೆ 85 ಕೋಟಿ ರೂ., ಹೆಜಮಾಡಿ ಕೋಡಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ 180.84 ಕೋಟಿ ರೂ., ಹಂಗಾರುಕಟ್ಟೆಯಲ್ಲಿ ಕೋಸ್ಟಲ್​ ರ್ಬತ್​ ನಿಮಾರ್ಣ ಕಾಮಗಾರಿಗೆ 78.28 ಕೋಟಿ ರೂ., ಗಂಗೊಳ್ಳಿ ಕೋಸ್ಟಲ್​ ರ್ಬತ್​ ನಿಮಾರ್ಣ ಕಾಮಗಾರಿಗೆ 95.88 ಕೋಟಿ ರೂ. ಹಾಗೂ ಗಂಗೊಳ್ಳಿ ಫಿಶ್​ ಹಾರ್ಬರ್​ ಉನ್ನತಿಕರಣ ಕಾಮಗಾರಿಗೆ 22.18 ಕೋಟಿ ರೂ. ಒದಗಿಸಲಾಗಿದೆ. ವಿವಿಧ ಪ್ರದೇಶಗಳಲ್ಲಿ ತೀವ್ರ ಸಮುದ್ರ ಕೊರೆತ ಪ್ರತಿಬಂಧಿಸಲು 4.50 ಕೋಟಿ ರೂ. ಮೊತ್ತದಲ್ಲಿ 10 ತಡೆಗೋಡೆ ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

7 ಸಾವಿರ ವಿದ್ಯಾರ್ಥಿಗಳು

ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ 1,774, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ 4,884, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ 350 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 7,008 ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಮೊದಲಾದ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಶಾಸಕ ಯಶ್​ ಪಾಲ್​ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್​ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತಿಕ್​ ಬಾಯಲ್​, ಪೊಲೀಸ್​ ವರಿಷ್ಠಾಧಿಕಾರಿ ಹರಿರಾಮ್​ ಶಂಕರ್​, ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಅಥ್ಲೆಟಿ ಅಸೋಸಿಯೇಶನ್​ ಜಿಲ್ಲಾಧ್ಯಕ್ಷ ಹರಿಪ್ರಸಾದ್​ ರೈ ಮೊದಲಾದವರು ಉಪಸ್ಥಿತರಿದ್ದರು.