ಜಿಲ್ಲೆ

ಉಪ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಹಣದ ಹೊಳೆ

ಹುಬ್ಬಳ್ಳಿ : ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ. ಆದರೂ ಎನ್​ಡಿಎ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸೋಮವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ನವರು ಈ ಮೂರೂ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಚಿವರನ್ನು ಇರಿಸಿದೆ. ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್​ನವರು ಬಹಳ ಭ್ರ್ರುನಿರಸರಾಗಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಸರ್ಕಾರಿ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ಮಶಿನರಿ ಉಪಯೋಗಿಸಿಕೊಂಡು ದುಡ್ಡು ಹಂಚುತ್ತಿದ್ದಾರೆ. ಆದರೆ, ಇದನ್ನೆಲ್ಲ ಮೀರಿ ಎನ್​ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೇಳಿದರು.

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಎಲ್ಲೆಡೆಯೂ ಕಾಂಗ್ರೆಸ್ ಮಂತ್ರಿ ಮಂಡಲವೇ ಬೀಡು ಬಿಟ್ಟಿದೆ. ಇದರಿಂದಲೇ ಗೊತ್ತಾಗುತ್ತದೆ ಸೋಲುವ ಭಯದಲ್ಲಿ ಏನೇನು ತಂತ್ರ ಹೆಣೆದಿದ್ದಾರೆ, ಅದೆಷ್ಟು ಹಣ ಚೆಲ್ಲುತ್ತಿದ್ದಾರೆ ಎಂಬುದು ಎಂದು ಜೋಶಿ ಹೇಳಿದರು.