ಜಿಲ್ಲೆ

ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೂವಿನ ಪೂಜೆ

ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅಭಿವೃದ್ಧಿ ಸಮಿತಿ ವತಿಯಿಂದ ಬುಧವಾರ ಸಾಮೂಹಿಕ ಹೂವಿನ ಪೂಜೆ ನಡೆಯಿತು. ಪ್ರಧಾನ ತಂತ್ರಿ ಕೊರಂಗ್ರಪಾಡಿ ಕುವಾರಗುರು ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಸಹಕಾರದೊಂದಿಗೆ ಧಾರ್ಮಿಕ ಪೂಜಾ ವಿಧಾನ ನೆರವೇರಿದವು.

ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಡಾ.ಕೆ.ಪ್ರಕಾಶ್ ಶೆಟ್ಟಿ ಬಂಜಾರ, ಲಾಲಾಜಿ ಆರ್.ಮೆಂಡನ್, ಅನಿಲ್ ಬಲ್ಲಾಳ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಮುಖರಾದ ಕೆ.ರುಪತಿ ಭಟ್, ಉದಯ್ ಸುಂದರ್ ಶೆಟ್ಟಿ, ಮನೋಹರ ಶೆಟ್ಟಿ ಕಾಪು, ಸುಗ್ಗಿ ಸುಧಾಕರ ಶೆಟ್ಟಿ, ಧರ್ಮಪಾಲ ದೇವಾಡಿಗ, ಸುಧೀರ್ ಶೆಟ್ಟಿ ಸಾಗರ, ಕಾಪು ದಿವಾಕರ ಶೆಟ್ಟಿ, ವಾಧವ ಆರ್.ಪಾಲನ್, ಗಂಗಾಧರ ಸುವರ್ಣ, ಯೋಗೀಶ್ ಶೆಟ್ಟಿ ಬಾಲಾಜಿ, ಪ್ರಭಾಕರ ಪೂಜಾರಿ, ಕಿಶೋರ್ ಶೆಟ್ಟಿ ಕುತ್ಯಾರು, ಆರ್.ಜಿ.ಶೆಟ್ಟಿ, ಕೆ.ವಿಶ್ವನಾಥ್, ಶ್ರೀಕರ ಶೆಟ್ಟಿ ಕಲ್ಯಾ, ಡಾ.ಕೆ.ಪ್ರಶಾಂತ್ ಶೆಟ್ಟಿ, ಸುಧಾಕರ ಶೆಟ್ಟಿ ಮಕರ, ಭಗವಾನದಾಸ್ ಶೆಟ್ಟಿಗಾರ್, ನಿರ್ಮಲ್‌ಕುವಾರ್ ಹೆಗ್ಡೆ, ಬೀನಾ ವಿ.ಶೆಟ್ಟಿ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ.ಸುವರ್ಣ, ಸಾವಿತ್ರಿ ಗಣೆೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ ಸಾಲ್ಯಾನ್, ಮನೋಹರ ರಾವ್, ರವೀಂದ್ರ ಮಲ್ಲಾರು, ವಿಜಯಲಕ್ಷ್ಮೀ ಎಸ್.ಶೆಟ್ಟಿ, ಚರಿತಾ ದೇವಾಡಿಗ, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಭಕ್ತರು ಪಾಲ್ಗೊಂಡಿದ್ದರು.