ರಾಯಚೂರು: ಮಕ್ಕಳನ್ನು ಕಾರ್ಮಿಕತೆಯಲ್ಲಿ ತೊಡಗಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ ಇಲಾಖೆ ಅಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಸೂಚಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕ ಯೋಜನೆ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಕಾರಿಗಳು ಹೆಚ್ಚಿನ ರೀತಿಯಲ್ಲಿ ಗೌಪ್ಯತೆಯಿಂದ ದಾಳಿ ನಡೆಸಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವ ಕೆಲಸ ಮಾಡಬೇಕು ಎಂದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ವಿವಿಧ ಇಲಾಖೆಗಳ ಅಕಾರಿಗಳನ್ನು ಒಳಗೊಂಡ ಕಾರ್ಯಪಡೆ ರಚನೆ ಮಾಡಲಾಗಿದೆ. ತಾಲೂಕು ಮಟ್ಟದಲ್ಲಿ 13 ಇಲಾಖೆ ಅಕಾರಿಗಳನ್ನೊಳಗೊಂಡ ಟಾಸ್‌ಕೆೆರ್ಸ್ ಸಮಿತಿ ರಚನೆ ಮಾಡಲಾಗಿದೆ. ತಂಡಗಳು ದಾಳಿ ನಡೆಸುವ ಮೂಲಕ ಬಾಲಕಾರ್ಮಿಕರನ್ನು ಗುರುತಿಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು.
ಜನರಲ್ಲಿ ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗೋಡೆ ಬರಹ, ಕರಪತ್ರ, ಆಟೋ ಪ್ರಚಾರ, ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಪ್ರಮುಖವಾಗಿ ತಾಲೂಕು ಮಟ್ಟದಲ್ಲಿ ಹೆಚ್ಚಿನ ತಿಳುವಳಿಕೆ ಮೂಡಿಸಬೇಕಾದ ಅಗತ್ಯವಿದೆ ಎಂದು ಡಾ.ಕೆ.ಆರ್.ದುರಗೇಶ ಹೇಳಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ದಯಾನಂದ ಬೇಲೂರೆ, ಡಿಎಚ್‌ಒ ಡಾ.ಸುರೇಂದ್ರಬಾಬು, ಜಿಲ್ಲಾ ಕಾರ್ಮಿಕ ಅಕಾರಿ ಆರತಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.