ಧಾರವಾಡ: ಭವಿಷ್ಯತ್ತಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಅಽಕಾರಿಗಳು ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ಗ್ರಾಮ ಹಾಗೂ ಕ್ಷೇತ್ರಮಟ್ಟದ ಮೂಲ ಬೇಡಿಕೆಗಳಿಗೆ ಜಿಲ್ಲಾ ವಾರ್ಷಿಕ ಅಭಿವೃದ್ಧಿ ಯೋಜನೆಯಲ್ಲಿ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಽಕಾರಿಗಳಿಗೆ ಶುಕ್ರವಾರ ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿಸುವ ಕುರಿತು ಜರುಗಿದ ಪುನರ್ ಮನನ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲಾ ಅಭಿವೃದ್ಧಿಯ ಯೋಜನಾ ವರದಿಯನ್ನು ರೂಪಿಸುವಾಗ ಗ್ರಾಮೀಣ ಮತ್ತು ಪಟ್ಟಣ ಸ್ಥಳೀಯ ಸಂಸ್ಥೆಗಳ ಯೋಜನೆಗಳನ್ನು ಸಮನ್ವಯಗೊಳಿಸಬೇಕು ಮತ್ತು ಸ್ಥಳೀಯ ಅವಶ್ಯಕತೆಗಳು, ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕೆಂದು ತಿಳಿಸಿದರು. ವರದಿಯಲ್ಲಿ ಗ್ರಾಮಸ್ಥರ ಹಾಗೂ ನಗರವಾಸಿಗಳ ಆಶೋತ್ತರಗಳನ್ನು ಒಳಗೊಂಡಿರಬೇಕು. ಆದರೆ, ಯೋಜನೆಗಳು ಪ್ರತಿರೂಪವಾಗದಂತೆ ಎಚ್ಚರಿಕೆ ವಹಿಸಬೇಕು. ಲಭ್ಯವಾಗಿರುವ ಅನುದಾನ ಗಮನಿಸಿ ಯೋಜನೆಗಳನ್ನು ರೂಪಿಸಬೇಕು. ಮುಖ್ಯವಾಗಿ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ಕೃಷಿಗೆ ಪೂರಕ ಇಲಾಖೆಗಳು ಸಮಾಜ ಕಲ್ಯಾಣ, ಕ್ರೀಡೆ ಹೀಗೆ ಮುಖ್ಯವಾದ ಇಲಾಖೆಗಳ ಆಶಯಗಳನ್ನು ಪ್ರತಿನಿಽಸುವಂತೆ ರೂಪಿಸಬೇಕು ಎಂದರು.
ಜಿಲ್ಲಾ ಯೋಜನಾ ಸಮಿತಿ ಸದಸ್ಯ ಕಾರ್ಯದರ್ಶಿ ಆಗಿರುವ ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮದ ಬೇಡಿಕೆಗಳ ಪಟ್ಟಿ ತಯ್ಯಾರಿಸಿ, ತಾಲೂಕು ಹಂತದಲ್ಲಿ ಮತ್ತು ಜಿಲ್ಲಾ ಹಂತದಲ್ಲಿ ಪರಿಶೀಲಿಸಿ ಸೇರ್ಪಡೆಗೊಳಿಸಲು ಕ್ರಮ ವಹಿಸಬೇಕು. ಕ್ರೂಢೀಕರಿಸಲಾದ ಪ್ರಸ್ತಾವನೆಗಳನ್ನು ಹಾಗೂ ಕಾಮಗಾರಿಗಳನ್ನಾಗಿ ವಿಗಂಡಿಸಿ, ಇಲಾಖಾವಾರು ರೂಪಿಸಬೇಕು ಎಂದರು.
ಪ್ರೋಬೆಷನರಿ ಐಎಎಸ್ ಅಽಕಾರಿ ರಿತೀಕಾ ವರ್ಮಾ ವೇದಿಕೆಯಲ್ಲಿದ್ದರು. ಜಿಪಂ ಮುಖ್ಯ ಯೋಜನಾಽಕಾರಿ ದೀಪಕ ಮಡಿವಾಳರ ಸ್ವಾಗತಿಸಿದರು. ಜಿಪಂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಮಾರುತಿ ತಳವಾರ ವಂದಿಸಿದರು.