ಗುರುಕುಲ ಪದವಿಪೂರ್ವ ಕಾಲೇಜು ವಠಾರದಲ್ಲಿ ಕುಂದಾಪುರ ತಾಲೂಕು ಮಟ್ಟದ ಪುಟ್‌ಬಾಲ್ ಟೂರ್ನಿಯನ್ನು ಸುಭಾಶ್ಚಂದ್ರ ಶೆಟ್ಟಿ ಉದ್ಘಾಟಿಸಿದರು 
ಜಿಲ್ಲೆ

ಆಟಗಾರರಿಗೆ ಕ್ರೀಡಾಮನೋಭಾವನೆ ಅವಶ್ಯ

ಇಂದಿರಾ ಎನ್ ಕೆ

ಕುಂದಾಪುರ: ಯುವಕರ ಮಾನಸಿಕ ಸ್ಥಿರತೆ ಗಟ್ಟಿಗೊಳ್ಳಬೇಕಾದರೆ ಶಿಕ್ಷಣದ ಜತೆಗೆ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಕ್ರೀಡೆಯೂ ಅಗತ್ಯ. ಪ್ರತಿ ಸ್ಪರ್ಧಿಯಲ್ಲೂ ಕ್ರೀಡಾ ಮನೋಭಾವನೆ ಇರಬೇಕು ಎಂದು ಬಾಂಡ್ಯ ಎಜುಕೇಷನಲ್ ಟ್ರಸ್ಟ್ ಜಂಟಿ ಆಡಳಿತ ನಿರ್ದೇಶಕ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಸಂಯುಕ್ತ ಆಶ್ರಯದಲ್ಲಿ ಗುರುಕುಲ ಪದವಿ ಪೂರ್ವ ಕಾಲೇಜು ವಠಾರದಲ್ಲಿ ಶುಕ್ರವಾರ ಕುಂದಾಪುರ ತಾಲೂಕು ಮಟ್ಟದ ಪುಟ್‌ಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಬಾಂಡ್ಯ ಎಜುಕೇಷನಲ್ ಟ್ರಸ್ಟ್ ಜಂಟಿ ಆಡಳಿತ ನಿರ್ದೇಶಕಿ ಅನುಪಮಾ ಎಸ್. ಶೆಟ್ಟಿ, ಉಡುಪಿ ಜಿಲ್ಲೆ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಯೋಜಕ ರಾಮ ಶೆಟ್ಟಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಪ್ರಾಂಶುಪಾಲ ಅವಿನಾಶ್ ಆಚಾರ್ಯ ಸ್ವಾಗತಿಸಿದರು. ಪವಿತ್ರಾ ಶೆಟ್ಟಿ ವಂದಿಸಿದರು. ನಾಗರಾಜ್ ಗುಲ್ವಾಡಿ ನಿರೂಪಿಸಿದರು.