ಯಲಬುರ್ಗಾ ಹಿಂದುಳಿದ ವರ್ಗ ಇಲಾಖೆಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ನ್ಯಾಯಾಧೀಶ ರಂಗಸ್ವಾಮಿ ಜೆ, ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್ ಬೆಲೇರಿ, ಅಪರ ಸರ್ಕಾರಿ ವಕೀಲರಾದ ಮಲ್ಲನಗೌಡ ಪಾಟೀಲ್, ತಾಪಂ ಇಒ ಸಂತೋಷ ಬಿರಾದರ ಪಾಟೀಲ್, ತಾಲೂಕು ಹಿಂದುಳಿದ ವರ್ಗ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಶಿವಶಂಕರ ಕರಡಕಲ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಶಿಧರ್ ಸಕ್ರಿ ಇತರರಿದ್ದರು. ಫಲಾನುಭವಿಗಳಿಗೆ 
ಜಿಲ್ಲೆ

ಫಲಾನುಭವಿಗಳಿಗೆ ಯೋಜನೆ ತಲುಪಿಸಿ

ಯಲಬುರ್ಗಾ:ಸಂವಿಧಾನ ಎಲ್ಲ ವರ್ಗದವರಿಗೂ ನ್ಯಾಯ ಒದಗಿಸಿದೆ ಎಂದು ನ್ಯಾಯಾಧೀಶ ರಂಗಸ್ವಾಮಿ ಜೆ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ ನ್ಯಾಯವಾದಿಗಳ ಸಂಘ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಹಿಂದುಳಿದ ವರ್ಗ ಇಲಾಖೆಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಕೀಲರು ಹಾಗೂ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಸರ್ಕಾರಿ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲಾ ವರ್ಗದ ಜನರಿಗೆ ಹಾಗೂ ಬಡವ ಬಲ್ಲಿದ ಎನ್ನುವಂತಹ ಭೇದ-ಭಾವವಿಲ್ಲದೆ ಒಂದೆ ನ್ಯಾಯದಾನ ವ್ಯವಸ್ಥೆ ನಮ್ಮ ದೇಶದಲ್ಲಿ ಇದೆ ಎಂದರು.

ವಕೀಲರ ಸಂಘದ ಕಾರ್ಯದರ್ಶಿ ಈರಣ್ಣ ಕೋಳೂರು, ಎ ಎಂ ಪಾಟೀಲ್ ಇತರರಿದ್ದರು.