ಕುರುಗೋಡಿನ ಮುಖ್ಯ ವೃತ್ತದ ಉದ್ಯಾನದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಪುರಸಭೆ ಮುಖ್ಯಾಧಿಕಾರಿ ಎಂ. ವಿಜಯಲಕ್ಷ್ಮೀ, ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪ, ಆರೋಗ್ಯ ನಿರೀಕ್ಷಕ ಯುವರಾಜ ಇತರರಿದ್ದರು. 
ಜಿಲ್ಲೆ

ಮಕ್ಕಳು, ಗ್ರಾಮಸ್ಥರಿಗೆ ಪ್ರತಿಜ್ಞಾವಿಧಿ ಬೋಧನೆ

ರುದ್ರಪ್ಪ ವಾಲಿ

ಕುರುಗೋಡು: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಪಟ್ಟಣದ ವಿವಿಧೆಡೆ ಪುರಸಭೆಯಿಂದ ಸ್ವಚ್ಛತಾ ಕಾರ್ಯ ನಡೆಯಿತು.

ಪುರಸಭೆ ಮುಖ್ಯಾಧಿಕಾರಿ ಎಂ.ವಿಜಯಲಕ್ಷ್ಮೀ ಮಾತನಾಡಿ, ಸ್ವಚ್ಛತೆಯೇ ಸೇವೆ, ಸ್ವಚ್ಛತೆಯೇ ದೇವರು ಎಂಬ ಭಾವನೆ ಪ್ರತಿಯೊಬ್ಬರಲ್ಲಿ ಮೂಡಬೇಕು. ಗ್ರಾಮದ ಕೆರೆ, ಬಾವಿ, ಶಾಲೆ, ರಸ್ತೆ ಸೇರಿ ಎಲ್ಲವನ್ನೂ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಮಕ್ಕಳು ಹಾಗೂ ಗ್ರಾಮಸ್ಥರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ದೊಡ್ಡ ಬಸವೇಶ್ವರ ದೇವಸ್ಥಾನ, ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಡಿವ ನೀರಿನ ಕೆರೆ, ಉದ್ಯಾನ, ಬಸ್ ಡಿಪೋ, ಅಂಗನವಾಡಿ, ತಾಪಂ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಗ್ರೇಡ್-2 ತಹಸೀಲ್ದಾರ್ ಮಲ್ಲೇಶಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಯುವರಾಜ, ಬಸ್ ಘಟಕದ ವ್ಯವಸ್ಥಾಪಕ ಗಂಗಾಧರ, ಮುಖ್ಯಶಿಕ್ಷಕ ಮಾರುತಿ ಗಾಳಿ, ದೈಹಿಕ ಶಿಕ್ಷಣ ಶಿಕ್ಷಕ ಶಾಂತನಾಯಕ್ ಇತರರಿದ್ದರು..