ಬಸನಗೌಡ ಪೊಲೀಸ್ ಪಾಟೀಲ್ 
ಜಿಲ್ಲೆ

ಸಾಲಬಾಧೆಗೆ ರೈತ ಆತ್ಮಹತ್ಯೆ

ರುದ್ರಪ್ಪ ವಾಲಿ

ಕಾರಟಗಿ: ಭತ್ತ ಬೆಳೆಯಲು ವಿವಿಧೆಡೆ ಸಾಲ ಮಾಡಿಕೊಂಡಿದ್ದ ರೈತ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹುಳ್ಕಿಹಾಳ ಗ್ರಾಮದಲ್ಲಿ ಬುಧವಾರ ನಡೆದಿದೆ.

ಬಸನಗೌಡ ಪೊಲೀಸ್ ಪಾಟೀಲ್ (42) ಆತ್ಮಹತ್ಯೆಗೆ ಶರಣಾದ ರೈತ. ಶ್ರೀ ರಾಮನಗರದ ಕೆನರಾ ಬ್ಯಾಂಕ್‌ನಲ್ಲಿ 3 ಲಕ್ಷ ರೂ., ಕಾರಟಗಿ ಕೆನರಾ ಬ್ಯಾಂಕ್‌ನಲ್ಲಿ ಬಂಗಾರ ಒತ್ತೆಯಿಟ್ಟು 80 ಸಾವಿರ ರೂ. ಸಾಲ ಪಡೆದಿದ್ದ. ಇದಲ್ಲದೇ, ವಿವಿಧೆಡೆ 7 ಲಕ್ಷ ರೂ. ಕೈಗಡ ಸಾಲ ಪಡೆದು, ಬೆಳೆ ಬೆಳೆದಿದ್ದ.

ಬೆಳೆ ಸರಿಯಾಗಿ ಬಾರದೆ ಇರುವುದರಿಂದ ಹಾಗೂ ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಕುಸಿತ ಕಂಡಿದ್ದ ಸಾಲದ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತನ ಪತ್ನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾರಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.