ಬೆಳಗಾವಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ಅಧಿಕಾರಿಗಳು, ಸಚಿವರ ಆಪ್ತ ಸಹಾಯಕರು ವಿಚಾರಿಸಿದರು. ಕಿರಣ ರಜಪೂತ್, ಮಲಗೌಡ ಪಾಟೀಲ ಇತರರಿದ್ದರು. 
ಜಿಲ್ಲೆ

ಕಾರ್ಮಿಕರ ಚಿಕಿತ್ಸೆಗೆ ಸಚಿವ ಜಾರಕಿಹೊಳಿ ಸೂಚನೆ

ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನರೇಗಾ ಕಾರ್ಮಿಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಅಧಿಕಾರಿಗಳು, ಸಚಿವರ ಆಪ್ತ ಸಹಾಯಕರು ಗುರುವಾರ ಭೇಟಿ ಮಾಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಯಮಕನಮರಡಿ ಕ್ಷೇತ್ರದ ಹಿಡಕಲ್ ಡ್ಯಾಂ ವ್ಯಾಪ್ತಿಯ ಕಾಮಗಾರಿಗೆ ಮನರೇಗಾ ಕಾರ್ಮಿಕರು ಟೆಂಪೋನಲ್ಲಿ ಹೋಗುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದ್ದಾರೆ ಎಂದು ಆಪ್ತ ಸಹಾಯಕ ಕಿರಣ ರಜಪೂತ್, ಮಲಗೌಡ ಪಾಟೀಲ ಸೂಚನೆ ತಿಳಿಸಿದ್ದಾರೆ.