ಜಿಲ್ಲೆ

ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಮುಖ್ಯ

ಚಿಕ್ಕೋಡಿ: ವಿಜ್ಞಾನದ ಬೆಳವಣಿಗೆಯೊಂದಿಗೆ ಸಾಮಾಜಿಕ ಮೌಲ್ಯಗಳ ಕುಸಿತವಾಗುತ್ತಿದೆ ಎಂದು ನಿವತ್ತ ಮುಖ್ಯಶಿಕ್ಷಕ ಬಿ.ಡಿ. ಕುಂಬಾರ ಹೇಳಿದರು.

ತಾಲೂಕಿನ ಮಜಲಟ್ಟಿ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಈಚೆಗೆ ಪ್ರೌಢಶಾಲಾ ವಿಭಾಗದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಮಾದರಿಯಾಗಿ ಬದುಕಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಉಪಪ್ರಾಚಾರ್ಯ ಜೆ.ಪಿ. ತಂಗಡಿ ಮಾತನಾಡಿ, ಪಾಲಕರ ಆಸೆಯಂತೆ ಒಳ್ಳೆಯ ಮಕ್ಕಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ವಡ್ರಾಳ ಗ್ರಾಪಂ ಅಧ್ಯಕ್ಷೆ ಪದ್ಮಜಾ ಸನದಿ ಉದ್ಘಾಟಿಸಿದರು. ರಾಜು ನಾಯಕ, ಸುರೇಶ್ ಗಟ್ಟಿ, ಮಹೇಶ್ ಕರೋಲಿ ಇತರರಿದ್ದರು.