ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಗುರುವಾರ ಕ್ರೀಡಾ ಚಟುವಟಿಕೆ ಕಾರ್ಯಕ್ರಮವನ್ನು ಪ್ರೊ. ವಿಜಯ ನಾಗಣ್ಣ ಉದ್ಘಾಟಿಸಿದರು. ಪ್ರೊ.ರವೀಂದ್ರನಾಥ, ಡಾ.ಶಂಕರ ಎಸ್.ತೇರದಾಳ, ಡಾ. ಬಿ.ಆರ್. ರಾಧ ಇತರರಿದ್ದರು. 
ಜಿಲ್ಲೆ

ವಿದ್ಯಾರ್ಥಿಗಳ ಪ್ರಗತಿಗೆ ಕ್ರೀಡೆಗಳು ಪೂರಕ

ಶಂಕರ ಗೆಜ್ಜಿ

ಬೆಳಗಾವಿ: ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದ್ದು, ಎಲ್ಲರೂ ಭಾಗವಹಿಸಬೇಕು ಎಂದು ರಾಣಿ ಚನ್ನಮ್ಮ ವಿವಿ ಕುಲಪತಿ ಪ್ರೊ. ವಿಜಯ ನಾಗಣ್ಣ ಹೇಳಿದರು. ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ 2023-24ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಹಾಗೂ ಸಾಂಸ್ಕೃತಿಕ, ಎನ್‌ಎಸ್‌ಎಸ್, ರೆಡ್ ಕ್ರಾಸ್ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಮೊದಲ ಗುರಿಯಾಗಬೇಕು ಎಂದರು. ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರನಾಥ ಮಾತನಾಡಿ, ಮಹಾವಿದ್ಯಾಲಯದಲ್ಲಿ ಹೆಚ್ಚು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿದ್ದು ಪ್ರತಿಭಾವಂತರಾಗಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಪಠ್ಯಚಟುವಟಿಕೆ ಜತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಪ್ರತಿಭಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ ಎಂದರು. ಪ್ರಾಚಾರ್ಯ ಡಾ. ಶಂಕರ ಎಸ್. ತೇರದಾಳ, ಡಾ.ಅರ್ಜುನ ಜಂಬಗಿ,ಡಾ. ಬಿ.ಆರ್. ರಾಧ, ಆರ್.ಎ. ಅರಳಿಮಟ್ಟಿ ಇತರರಿದ್ದರು.