ಬಸವರಾಜ ನಾಡಗೌಡ 
ಜಿಲ್ಲೆ

ಎರಡನೇ ಬೆಳೆಗೆ ನೀರು ಬಿಡದಿದ್ದರೆ ಹೋರಾಟ

ನರೇಶ್ ಕುಮಾರ್

ಸಿಂಧನೂರು: ತುಂಗಭದ್ರಾ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಹರಿಸಿ, ರೈತಾಪಿ ವರ್ಗಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಜೆಡಿಎಸ್ ತಾಲೂಕಾಧ್ಕಕ್ಷ ಬಸವರಾಜ ನಾಡಗೌಡ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳ ದುರಸ್ತಿ ಕಾರ್ಯ ಹಿನ್ನೆಲೆಯಲ್ಲಿ ಬೇಸಿಗೆ ಬೆಳೆಗೆ ನೀರು ಬಿಡುವುದು ಅನುಮಾನ ಎನ್ನಲಾಗುತ್ತಿದೆ. ಆದರೆ, ಗೇಟ್ ದುರಸ್ತಿ ಕಾರಣಕ್ಕಾಗಿ ಬೇಸಿಗೆ ಬೆಳೆಗೆ ನೀರು ಬಿಡದಿದ್ದರೆ ರೈತರು ತೀವ್ರ ಸಮಸ್ಯೆಗೆ ಸಿಲುಕುತ್ತಾರೆ. ರಾಜ್ಯ ಸರ್ಕಾರ ರೈತರ ಹಿತಕಾಯುವ ದೃಷ್ಟಿಯಿಂದ ಬೇಸಿಗೆ ಬೆಳೆಗೆ ನೀರು ಹರಿಸಬೇಕು.

ನೀರು ಬಿಡುವ ವಿಚಾರದಲ್ಲಿ ನಿರ್ಲಕ್ಷೃವಹಿಸಿದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕಳೆದ ಮೂರ‌್ನಾಲ್ಕು ದಿನಗಳಿಂದ ಸುರಿದ ಮಳೆಗೆ ಭತ್ತದ ಬೆಳೆಯೂ ಹಾಳಾಗಿದ್ದು, ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಕೂಡಲೇ ಜಂಟಿ ಸರ್ವೇ ನಡೆಸಬೇಕು. ರೈತರಿಗೆ ಬೆಳೆನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಅಶೋಕಗೌಡ ಗದ್ರಟಗಿ, ಜಿ.ಸತ್ಯನಾರಾಯಣ, ವೆಂಕಟೇಶ ನಂಜಲದಿನ್ನಿ, ರವಿ ಪನ್ನೂರು, ಸುಮಿತ್ ತಡಕಲ್, ಅಲ್ಲಮಪ್ರಭು ಪೂಜಾರ, ಚಂದ್ರಶೇಖರ ಮೈಲಾರ, ದಾಸರಿ ಅಜಯ್, ಆಸೀಫ್ ಇದ್ದರು.