ಜಿಲ್ಲೆ

ಮಂಗಳೂರು ಅಕ್ರಮ ನೆಲೆಸಿದ್ದ ಇಬ್ಬರು ವಿದೇಶಿಯರ ಬಂಧನ

ಹರೀಶ ಎಂ.

ಮಂಗಳೂರು : ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ವಾಸವಾಗಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.


ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ಬಂಧಿತರು. ಇವರು ಸ್ನೇಹಿತ ಅನಿಲ್ ಡಿಸಿಲ್ವಾ ಅವರ ಕಾರ್ಯಕ್ರಮಕ್ಕೆ ಬಂದಿದ್ದರು. ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ನೆಲೆಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ಬಂಧಿಸಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.