ಜಿಲ್ಲೆ

ಅರಣ್ಯ ಹುತಾತ್ಮರ ದಿನಾಚರಣೆ

Uttara Kannada - Subash Hegde

ಕಾರವಾರ: ಪರಿಸರ, ವನ್ಯಜೀವಿಗಳು ಮತ್ತು ಅರಣ್ಯ ಸಂರಕ್ಷಣೆಯ ಕಾರ್ಯದಲ್ಲಿ ಅರಣ್ಯ ಇಲಾಖೆಯ ನೌಕರರು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಹೇಳಿದರು.

ನಗರದ ಡಿಎಫ್‌ಒ ಕಚೇರಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛ ಸಲ್ಲಿಸಿ ಅವರು ಮಾತನಾಡಿದರು.

ಅರಣ್ಯ ಅಧಿಕಾರಿಗಳು ಮುಂದಿನ ಪೀಳಿಗೆಗೆ ಅರಣ್ಯವನ್ನು ಉಳಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಆದರೆ, ಅರಣ್ಯ ಮತ್ತು ಪರಿಸರ ಸಂರಕ್ಷಣೆ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಸಾರ್ವಜನಿಕರೂ ಕೈ ಜೋಡಿಸಬೇಕು. ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕರಿಗೆ ಅರಣ್ಯದ ಬಗ್ಗೆ ಹೆಚ್ಚಿನ ಅಭಿಮಾನ ಇರುವ ಕಾರಣದಿಂದಲೇ ಇಲ್ಲಿ ಹೆಚ್ಚು ಅರಣ್ಯ ಪ್ರದೇಶ ಇದೆ ಎಂದರು.

ಜಿಲ್ಲಾಽಕಾರಿ ಕೆ.ಲಕ್ಷ್ಮೀಪ್ರಿಯಾ ಮಾತನಾಡಿ, ಜಿಲ್ಲೆಯ ಅರಣ್ಯ ಪ್ರದೇಶವು ಪಕ್ಕದ ಜಿಲ್ಲೆಗಳು ಮತ್ತು ಗೋವಾ ರಾಜ್ಯದೊಂದಿಗೆ ಜೋಡಣೆಯಾಗಿದ್ದು, ಈ ಅರಣ್ಯ ಪ್ರದೇಶದಲ್ಲಿ ಅಕ್ರಮಗಳನ್ನು ತಡೆಯುವುದು ಸವಾಲಿನ ಕಾರ್ಯವಾಗಿದೆ. ಅರಣ್ಯ ಸಿಬ್ಬಂದಿ ವೈಯಕ್ತಿಕ ಆರೋಗ್ಯದ ಬಗ್ಗೆ ಗಮನ ನೀಡಬೇಕು. ಅತೀ ಕಡಿಮೆ ಮೊತ್ತದಲ್ಲಿ ದೊರೆಯುವ ವಿಮಾ ಯೋಜನೆಗಳನ್ನು ಪಡೆಯಬೇಕು ಈ ಕುರಿತು ಜಿಲ್ಲಾಡಳಿತದ ಮೂಲಕ ಪ್ರತ್ಯೇಕ ಶಿಬಿರ ಆಯೋಜಿಸಲಾಗುವುದು ಎಂದರು.

ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಽಕಾರಿ ಟಿ.ಹೀರಾಲಾಲ್, ಕರ್ತವ್ಯ ನಿರ್ವಹಣೆಯಲ್ಲಿ ಇದುವರೆಗೆ 62 ಅರಣ್ಯ ಸಿಬ್ಬಂದಿ, ಅಽಕಾರಿಗಳು ಹುತಾತ್ಮರಾಗಿದ್ದು, ಇವರ ತ್ಯಾಗ ಬಲಿದಾನಗಳು ಕರ್ತವ್ಯ ನಿರ್ವಹಣೆಯಲ್ಲಿ ನಮಗೆ ಮತ್ತಷ್ಟು ಪ್ರೇರಣೆಯಾಗಿದೆ ಎಂದರು.

ಕಾರವಾರ ಡಿಎಫ್‌ಒ ಸಿ.ರವಿಶಂಕರ್ ಸ್ವಾಗತಿಸಿದರು.ಜಿಪಂ ಸಿಇಒ ಡಾ.ದಿಲೀಶ್ ಶಶಿ, ಸಾಮಾಜಿಕ ಅರಣ್ಯ ವಿಭಾಗದ ಡಿಎಫ್‌ಒ ಮಂಜುನಾಥ ಜಿ ನಾವಿ, ಸಿಆರ್‌ಝಡ್ ನ ಪ್ರಾದೇಶಿಕ ನಿರ್ದೇಶಕ ಪ್ರವೀಣ್ ಬಸ್ರೂರು, ಎಸಿಎಫ್‌ಗಳಾದ ಕೆ.ಡಿ.ನಾಯ್ಕ, ಕೆ.ಸಿ.ಜಯೇಶ ಉಪಸ್ಥಿತರಿದ್ದರು.