ಜಿಲ್ಲೆ

ರೈತನ ಮೇಲೆ ಚಿರತೆ ದಾಳಿ

Mysuru - Desk - Yashavanth Kumar N

ಮದ್ದೂರು: ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ರೈತನ ಮೇಲೆ ದಾಳಿ ಮಾಡಿರುವ ಚಿರತೆ ಮೇಕೆಯನ್ನು ಹೊತ್ತೊಯ್ದಿದೆ.
ಗ್ರಾಮದ ರೈತ ಶಶಿಕುಮಾರ್ (45) ಮೇಲೆ ದಾಳಿ ಮಾಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಮೇಕೆಯನ್ನು ಹೊತ್ತೊಯ್ದಿದೆ.

ಮಧ್ಯಾಹ್ನ ಶಶಿಕುಮಾರ್ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಚಿರತೆ ದಾಳಿ ಮಾಡಿದ್ದು, ಕೈಗಳಿಗೆ ಸಣ್ಣ ಪ್ರಮಾಣದಲ್ಲಿ ಗಾಯವಾಗಿದೆ. ಬಳಿಕ ಚಿರತೆ ಅನತಿ ದೂರದಲ್ಲಿದ್ದ ಮೇಕೆಯನ್ನು ಹೊತ್ತೊಯ್ದಿದೆ. ಅರಣ್ಯಾಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಬೋನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ರೂಪಿಸುವುದಾಗಿ ಭರವಸೆ ನೀಡಿದ್ದಾರೆ.

ತಾಲೂಕಿನಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಹಗಲಿನಲ್ಲೇ ಮನಷ್ಯರ ಮೇಲೆ ದಾಳಿ ಮಾಡುತ್ತಿವೆ. ಅರಣ್ಯಾಧಿಕಾರಿಗಳು ಹಾಗೂ ಸರ್ಕಾರ ಚಿರತೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.