ಜಿಲ್ಲೆ

24ರಂದು ಸಿರಿಗೆರೆಗೆ ಬಿಎಸ್‌ವೈ,ಸಿಎಂ ಬೊಮ್ಮಾಯಿ

Chitradurga
ಚಿತ್ರದುರ್ಗ:ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಲಿಂಗೈಕೈ ಶ್ರೀ ಶಿವಕುಮಾರ ಶಿವಾಚಾರ‌್ಯ ಸ್ವಾ ಮೀಜಿ ಅವರ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಸೆ.24ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿರಿಗೆರೆಗೆ ಆಗಮಿಸುತ್ತಿದ್ದಾರೆ.

ಬೆಳಗ್ಗೆ 11ಕ್ಕೆ ಆರಂಭವಾಗುವ ಈ ಸಮಾರಂಭದ ಸಾನ್ನಿಧ್ಯವನ್ನು ಸಿರಿಗೆರೆ ಶ್ರೀ ತರಳಬಾಳು ಡಾ.ಶಿವಮೂರ್ತಿ ಶಿವಾಚಾರ‌್ಯ ಸ್ವಾಮೀಜಿ ವ ಹಿಸಲಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಸಿಎಂ ಬಸವರಾಜ ಬೊಮ್ಮಾಯಿ,ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಶಾಮನೂರು ಶಿವಶಂಕರಪ್ಪ,ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಎಂ.ಬಿ.ಪಾಟೀಲ್ ಅವರು ಪಾಲ್ಗೊಳ್ಳಲಿದ್ದಾರೆ.

ಶಾಸಕರಾದ ಎಸ್.ಎ.ರವೀಂದ್ರನಾಥ್,ಮಾಡಾಳು ವಿರೂಪಾಕ್ಷಪ್ಪ,ಜಿ.ಎಚ್.ತಿಪ್ಪಾರೆಡ್ಡಿ,ಬೆಳ್ಳಿ ಪ್ರಕಾಶ್,ಎಸ್.ವಿ.ರಾಮಚಂದ್ರಪ್ಪ ಹಾಗೂ ಸಿರಿಗೆರೆ ಶ್ರೀಮತ್ ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

--