ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ ಅವರ 55ನೇ ಹುಟ್ಟು ಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಹಾಗೂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಅಭಿಮಾನಿ ಬಳಗ ವತಿಯಿಂದ ಮದ್ದೂರು ಪಟ್ಟಣದ ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಲಾಯಿತು. ನಿಡಘಟ್ಟ ಸುನೀಲ್, ಸಿ.ಕೆ.ಸತೀಶ್, ಸತೀಶ್, ಮ.ನ.ಪ್ರಸನ್ನಕುಮಾರ್, ಕೆಂಪುಬೋರಯ್ಯ, ಎಂ.ಸಿ.ಸಿದ್ದು, ಶ್ವೇತಾ, ರಾಮೇಗೌಡ, ತ್ರಿವೇಣಿ, ಸೌಮ್ಯಾ, ಸಿಂಧು, ಸುರೇಶ್ ಇದ್ದರು. 
ಜಿಲ್ಲೆ

ಮದ್ದೂರಿನಲ್ಲಿ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ಹುಟ್ಟುಹಬ್ಬ ಆಚರಣೆ

ಮದ್ದೂರು: ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ ಅವರ 55ನೇ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಹಾಗೂ ಡಾ.ಸಿ.ಎನ್.ಅಶ್ವತ್ಥ್‌ನಾರಾಯಣ ಅಭಿಮಾನಿ ಬಳಗ ವತಿಯಿಂದ ಭಾನುವಾರ ಬಿಜೆಪಿ ಮುಖಂಡ ಸುನೀಲ್ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬಿಜೆಪಿ ಮುಖಂಡ ನಿಡಘಟ್ಟ ಸುನೀಲ್ ಮಾತನಾಡಿ, ಡಾ.ಸಿ.ಎನ್.ಅಶ್ವತ್ಥ್‌ನಾರಾಯಣ ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಳಗ್ಗೆ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ಹಾಗೂ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಭಕ್ತರಿಗೆ ಪ್ರಸಾದ ಹಾಗೂ ಸಿಹಿ ವಿತರಣೆ ಮಾಡಲಾಯಿತು. ನಂತರ ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು.

ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್, ಮುಖಂಡರಾದ ಸತೀಶ್, ಮ.ನ.ಪ್ರಸನ್ನಕುಮಾರ್, ಕೆಂಪುಬೋರಯ್ಯ, ಎಂ.ಸಿ.ಸಿದ್ದು, ಶ್ವೇತಾ, ರಾಮೇಗೌಡ, ತ್ರಿವೇಣಿ, ಸೌಮ್ಯಾ, ಸಿಂಧು, ಸುರೇಶ್ ಇತರರು ಇದ್ದರು.