ಬಿಡದಿ: ಪಟ್ಟಣದಲ್ಲಿ ಆ.2ರಂದು ಆಯೋಜನೆಗೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ದೇಶಭಕ್ತರು ಆಗಮಿಸಬೇಕು ಎಂದು ಜೆಡಿಎಸ್ ಮಾಜಿ ಶಾಸಕ ಎ.ಮಂಜುನಾಥ್ ಗಣವೇಷ ಧರಿಸಿ ವಿಡಿಯೋ ಮೂಲಕ ಕರೆ ನೀಡಿದ್ದು, ಕ್ಷೇತ್ರದಲ್ಲಿ ಹೊಸ ರಾಜಕೀಯ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ.
ವಿಡಿಯೋದಲ್ಲಿ ಏನಿದೆ?: ರಾಷ್ಟ್ರೀಯ ಸ್ವಯಂಸೇವಕ ಸಂ ಸ್ಥಾಪನೆಯಾಗಿ ಅಕ್ಟೋಬರ್ 2ಕ್ಕೆ 100 ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಅಂದು ಬಿಡದಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ದೇಶಭಕ್ತರು ಗಣವೇಷಧಾರಿಗಳಾಗಿ ಬರಬೇಕು ಎಂದು ಮಂಜುನಾಥ್ ವಿಡಿಯೋದಲ್ಲಿ ತಿಳಿಸಿದ್ದಾರೆ. ಗಣವೇಷಧರಿಸಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಕುರಿತಂತೆ ವಿಜಯವಾಣಿಯೊಂದಿಗೆ ಮಾತಾನಾಡಿದ ಎ.ಮಂಜುನಾಥ್, ಇದೊಂದು ಐತಿಹಾಸಿಕ ಕಾರ್ಯಕ್ರಮ. ಒಂದು ರಾಷ್ಟ್ರೀಯ ಸಂ ಶತಮಾನ ಪೂರೈಸುತ್ತಿದ್ದು, ಈ ಸಂಭ್ರಮದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯಶಸ್ವಿಗೊಳಿಸಿ ಎಂದು ಸಾಮಾನ್ಯ ವ್ಯಕ್ತಿಯಾಗಿ ಮನವಿ ಮಾಡಿದ್ದೇನೆ ಹೊರತು ಇದರಲ್ಲಿ ಯಾವುದೇ ಚರ್ಚೆಗೆ ಗ್ರಾಸವಾಗುವ ವಿಚಾರಗಳಿಲ್ಲ. ನಾನು ಗಣವೇಷಧರಿಸಿದ್ದಕ್ಕೆ ಹೆಚ್ಚಿನ ಮಹತ್ವ ಕೊಡುವುದೂ ಬೇಡ ಎಂದಿದ್ದಾರೆ.