ನಗರಸಭೆ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಸತ್ಯನಾರಾಯಣ 
ಜಿಲ್ಲೆ

ನಗರಸಭೆ ಮಾಜಿ ಸದಸ್ಯ, ತರಕಾರಿ ಸತ್ಯನಾರಾಯಣ ಆತ್ಮಹತ್ಯೆ

ಶಿವಮೊಗ್ಗ: ನಗರಸಭೆ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಸತ್ಯನಾರಾಯಣ(74) ವಿನೋಬನಗರದ ವಾಟರ್ ಟ್ಯಾಂಕ್ ಬಳಿಯಿರುವ ತಮ್ಮ ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ತರಕಾರಿ ಸತ್ಯನಾರಾಯಣ ಎಂದೇ ರಾಜಕೀಯ ಜೀವನದಲ್ಲಿ ಗುರುತಿಸಿಕೊಂಡಿದ್ದರು. ಮೂವರು ಮಕ್ಕಳಿದ್ದು, ಒಬ್ಬರು ಸರ್ಕಾರಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮತ್ತೊಬ್ಬರು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮತ್ತೊಬ್ಬರು ಉದ್ಯಮಿಯಾಗಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವ ಡೆತ್‌ನೋಟ್ ದೊರೆತಿದ್ದು, ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.