ಜಿಲ್ಲೆ

ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ, ಪರಿಸ್ಥಿತಿ ಗಂಭೀರ..

ಕೋಲಾರ: ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ ಆರ್​.ಎಲ್. ಜಾಲಪ್ಪ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಜಾಲಪ್ಪ ಅವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

98 ವರ್ಷ ವಯಸ್ಸಿನ ಜಾಲಪ್ಪ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದೆ ಎಂಬುದಾಗಿ ಅವರ ಸಂಬಂಧಿ ಜಿ.ಎಚ್. ನಾಗರಾಜ್ ಅವರಿಂದ ತಿಳಿದುಬಂದಿದೆ.