ಹುಬ್ಬಳ್ಳಿ: ಮಾಜಿ ಶಾಸಕರೊಬ್ಬರ ಪುತ್ರ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಮಗ ಸೂರಜ್ ಹಾಲಹರವಿ (18) ಮೃತ ದುರ್ದೈವಿ.
ವೀರಭದ್ರಪ್ಪ ಹಾಲಹರವಿ ಅವರ ಮನೆ ದೇಶಪಾಂಡೆ ನಗರದಲ್ಲಿದೆ. ಮಹಡಿ ಮನೆಯ ಕೋಣೆಯಲ್ಲಿ ಸೂರಜ್ ಹಾಲಹರವಿ ನೇಣಿಗೆ ಶರಣಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.