ಹಿರೇಕೆರೂರ: ಸಾಲದ ಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಾದ್ರಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಬಸಪ್ಪ ಕಲ್ಲಪ್ಪ ಮುಳಗುಂದ (55) ಮೃತಪಟ್ಟ ರೈತ. ಇವರು ಕೃಷಿಗಾಗಿ ಕೆವಿಜಿ ಬ್ಯಾಂಕ್‌ನಲ್ಲಿ 1.10 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ.
\ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಸರಿಯಾಗಿ ಬೆಳೆ ಬಾರದ ಕಾರಣ ಸಾಲವನ್ನು ಹೇಗೆ ತೀರಿಸಬೇಕು ಎಂದು ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸ್ನಾನ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರೇಕೆರೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.