ವಿಜಯಪುರದ ಗಗನ ಮಹಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ಏಡ್ಸ್ ವಿಶ್ವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ .ಎಸ್ ಹಾಗರಗಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಡಾ. ಮಲ್ಲನಗೌಡ .ಬಿ ಬಿರಾದಾರ ಮತ್ತಿತರರಿದ್ದಾರೆ.  
ಜಿಲ್ಲೆ

ಎಚ್‌ಐವಿ ಮುಕ್ತ ಜಿಲ್ಲೆಗೆ ಕಾರ್ಯಕ್ರಮ ರೂಪಿಸಿ; ಅರವಿಂದ .ಎಸ್ ಹಾಗರಗಿ

Vijyapura - Parsuram Bhasagi

ವಿಜಯಪುರ: ಎಚ್‌ಐವಿ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಾಗೂ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ .ಎಸ್ ಹಾಗರಗಿ ಹೇಳಿದರು.

ನಗರದ ಗಗನ ಮಹಲ್ ಆವರಣದಲ್ಲಿ ಏಡ್ಸ್ ವಿಶ್ವ ದಿನಾಚರಣೆ ಅಂಗವಾಗಿ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳು, ರೆಡ್ ರಿಬ್ಬನ್ ಕ್ಲಬ್ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಆಪ್ತ ಸಮಾಲೋಚನೆಯ ಮೂಲಕ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಏಡ್ಸ್ ತಡೆಗಟ್ಟುವಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಏಡ್ಸ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು. ಕರಪತ್ರ, ಪೋಸ್ಟರ್, ಬ್ಯಾನರ್, ಗೋಡೆಬರಹದ ಮೂಲಕ ಏಡ್ಸ್ ರೋಗದ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಪಂ ಸಿಇಒ ರಿಷಿ ಆನಂದ ಮಾತನಾಡಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಮಲ್ಲನಗೌಡ. ಬಿ. ಬಿರಾದಾರ, ಡಿಎಚ್‌ಒ ಡಾ. ಸಂಪತ್ ಗುಣಾರಿ, ಪೀಟರ್ ಅಲೆಕ್ಸಾಂಡರ್, ಡಾ. ಪ್ರಕಾಶ ರಾಠೋಡ, ಫಾದರ್ ಟಿಯೊಲ್ ಮಚಾದೊ, ಸುನಿಲ್ ಕಾಂಬಳೆ, ಡಿವೈಎಸ್‌ಪಿ ಗಂಗಯ್ಯ ಹಿರೇಮಠ, ಡಾ. ಎಲ್.ಎಚ್. ಬಿದರಿ, ಡಾ. ಜಾನ್‌ಕಟವಟೆ, ಸುರೇಶ ಹೊಸಮನಿ ಮತ್ತಿತರರಿದ್ದರು.

ಕೇಂದ್ರ ಬಸ್ ನಿಲ್ದಾಣದಿಂದ ಕೆ.ಸಿ ಮಾರ್ಕೆಟ್ ಮಾರ್ಗವಾಗಿ ಗಗನ ಮಹಲ್‌ವರೆಗೆ ಜಾಗೃತಿ ಜಾಥಾ ನಡೆಯಿತು. ಎಎಸ್‌ಪಿ ಶಂಕರ ಮಾರಿಹಾಳ ಚಾಲನೆ ನೀಡಿದರು. ವಿವಿಧ ಪದವಿ ಹಾಗೂ ನಸಿರ್ಂಗ್ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.