ಜಮಖಂಡಿ: ನಗರದ ಬಾಗಲಕೋಟ ವಿಶ್ವ ವಿದ್ಯಾಲಯದಲ್ಲಿ ಮೇ 12 ರಂದು ಬೆಳಗ್ಗೆ 10 ಗಂಟೆಗೆ ವಿಶ್ವ ವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ. ಆನಂದ ಎಸ್. ದೇಶಪಾಂಡೆ ತಿಳಿಸಿದರು.
ವಿಶ್ವವಿದ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಜಗದೀಶ ಗುಡಗುಂಟಿ, ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತರೀಕೆರೆ ಸಿ. ತಾರಾನಾಥ, ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಎಚ್. ಜಂಗಮಶೆಟ್ಟಿ, ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ.ಆರ್. ಗಂಗಾಧರ, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ, ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ, ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಎಸ್. ಆಲೂರ ಗೌರವ ಉಪಸ್ಥಿತರಿರುವರು ಎಂದರು.
ಮೇ 30 ರಂದು ಬೆಳಗ್ಗೆ 10 ಗಂಟೆಗೆ ಪ್ರಸಾರಾಂಗ ವಿಭಾಗದ ಅಡಿಯಲ್ಲಿ ಸಮಾಜ ಮತ್ತು ಮಾಧ್ಯಮಗಳು ಒಂದು ದಿನದ ವಿಚಾರ ಸಂಕಿರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಡಾ.ಆರ್.ನಾಗರಾಜು, ಡಾ.ಮಲ್ಲಿಕಾರ್ಜುನ ಮರಡಿ, ಪ್ರೊ. ದಯಾನಂದ ಸಾವಕಾರ ಮತ್ತಿತರರಿದ್ದರು.