ಮೈಸೂರು: ಪ್ರವಾಸೋದ್ಯಮ ಮಂತ್ರಾಲಯ, ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಕೇಂದ್ರ ಪುರಸ್ಕೃತ ‘ಪ್ರಸಾದ್’ ಮತ್ತು ‘ಸ್ವದೇಶ್ ದರ್ಶನ್ 2.0’ ಯೋಜನೆಯಡಿ ಶ್ರೀ ಚಾಮುಂಡೇಶ್ವರಿದೇವಿ ದೇವಸ್ಥಾನ ಅಭಿವೃದ್ಧಿ, ಇಕೋಲಾಜಿಕಲ್ ಎಕ್ಸ್ಪೀರಿಯನ್ಸ್ ಜೋನ್ ಟಾಂಗಾ ರೈಡ್, ಹೆರಿಟೇಜ್ ಎಕ್ಸ್ಪೀರಿಯನ್ಸ್ ಜೋನ್ ಅಭಿವೃದ್ಧಿ ಕಾರ್ಯಕ್ರಮದ ಶಂಕುಸ್ಥಾಪನೆ ಮಾ.7ರಂದು ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10.15ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಶಂಕುಸ್ಥಾಪನೆ ಮಾಡಲಿದ್ದಾರೆ. ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಆ್ಯಂಪಿಥಿಯೇಟರ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಜಂಗಲ್ ಲಾಡ್ಜ್ ಅಧ್ಯಕ್ಷ ಸಿ.ಅನಿಲ್‌ಕುಮಾರ್, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸಪ್ರಸಾದ್, ಸಂಸದೆ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.