ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಸಪರಿವಾರ ಶ್ರೀ ಸಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದ ದೈವಜ್ಞ ವಳಕುಂಜ ವೆಂಕಟರಮಣ ಜೋಯಿಸರ ಮಾರ್ಗದರ್ಶನದಲ್ಲಿ ವಾಸ್ತುಶಿಲ್ಪಿ ಗಿರೀಶ ಶರ್ಮರ ನಿರ್ದೇಶಾನುಸಾರ ಪರಕ್ಕಜೆ ಅನಂತನಾರಾಯಣ ಭಟ್ಟರ ಆಚಾರ್ಯತ್ವದಲ್ಲಿ ಶನಿವಾರ ನಡೆಯಿತು.
ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಎಂ.ಹರ್ಷ ಸಂಪಿಗೆತ್ತಾಯ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಬೆಳ್ತಂಗಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪ್ ಸಿಂಹ ನಾಯಕ್, ಉದ್ಯಮಿ ಕಿರಣ ಚಂದ್ರ ಪುಷ್ಪಗಿರಿ ಬೆಳ್ತಂಗಡಿ, ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಧರ್ಮದರ್ಶಿ ಹರೀಶ್ ಅರಿಕೋಡಿ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರ ವಿಭಾಗ ಯೋಜನಾಧಿಕಾರಿ ದಯಾನಂದ,ಶ್ರೀ ಮಹಿಷಮರ್ದಿನಿ ದೇವಸ್ಥಾನ ಪಾರೆಂಕಿ ಅಧ್ಯಕ್ಷ ವಿಠಲ ಶೆಟ್ಟಿ ಮೂಡಯೂರು, ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನ ಓಡೀಲು ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ , ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಮೈರಳಿಕೆ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಮಚ್ಚಿನ ಗ್ರಾಪಂ ಉಪಾಧ್ಯಕ್ಷೆ ಸೋಮಾವತಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹೊನ್ನಪ್ಪ ಕುಲಾಲ್, ಪವಿತ್ರಪಾಣಿ ಎಂ.ಕೃಷ್ಣ ಭಟ್ ಮಾಣೂರು, ಆಡಳಿತ ಅಧಿಕಾರಿ ಗೌರಿಶಂಕರ ಎಚ್.ಎಸ್.ಉಪಸ್ಥಿತರಿದ್ದರು.