ಜಿಲ್ಲೆ

ಫೌಂಡೇಷನ್ ಟ್ರಸ್ಟ್ ಪೂರ್ವಭಾವಿ ಸಭೆ

ಸೌಮ್ಯ ಆರ್

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಮಾ.27ರಂದು ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಎರಡನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ, ಘಟಕ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

ಅಂದು ಪಾವಂಜೆ ಮೇಳದವರಿಂದ ಭಾರತ ವರ್ಷಿಣಿ ಯಕ್ಷಗಾನ ಪ್ರದರ್ಶನ ಹಾಗೂ ಹಿರಿಯ ಯಕ್ಷಗಾನ ಕಲಾವಿದ ಕೆ.ಗೋವಿಂದ ಭಟ್ ಹಾಗೂ ಹಿರಿಯ ರಂಗಭೂಮಿ ಕಲಾವಿದ ಡಿ.ಎಸ್.ಬೋಳೂರು ಅವರನ್ನು ಸನ್ಮಾನಿಸಲಾಗುವುದು. ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಘಟಕ ಪ್ರ.ಕಾರ್ಯದರ್ಶಿ ದೇವದಾಸ್ ಶೆಟ್ಟಿ ನಿರೂಪಿಸಿದರು. ಮೋಹನ್‌ದಾಸ್ ಕೊಟ್ಟಾರಿ ವಂದಿಸಿದರು.