ಬೈಂದೂರು: ಬದುಕಿನಲ್ಲಿ ಅವಕಾಶ ದೊರೆಯುವುದು ವಿರಳ. ಆದರೆ ದೊರೆತ ಅವಕಾಶಗಳನ್ನು ಸಾರ್ಥಕ ಸದುಪಯೋಗ ಪಡಿಸಿಕೊಳ್ಳಬೇಕಾಗಿರುವುದು ಯುವಜನತೆಯ ಜವಾಬ್ದಾರಿ. ಈ ನೆಲೆಯಲ್ಲಿ ಜೇಸಿ ಸಂಸ್ಥೆ ಯುವ ಸಮುದಾಯದ ಸಂಘಟನಾ ಪ್ರಯತ್ನ ಶ್ಲಾಘನೀಯ ಎಂದು ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ ಶೆಟ್ಟಿ ಹೇಳಿದರು.
ಉಪ್ಪುಂದ ರೈತಸಿರಿ ಭವನದಲ್ಲಿ ಸ್ಥಳೀಯ ಜೆಸಿಐ ಘಟಕದ 21ನೇ ವರ್ಷದ ಸಂಸ್ಥಾಪಕರ ದಿನಾಚರಣೆ ಸಮಾರಂಭದಲ್ಲಿ ಘಟಕದ ಸ್ಥಾಪಕಾಧ್ಯಕ್ಷ ಎನ್.ದಿವಾಕರ ಶೆಟ್ಟಿ ದಂಪತಿಗೆ ಸನ್ಮಾನಿಸಿ ಮಾತನಾಡಿದರು.
ಜಿ.ಪಂ. ಮಾಜಿ ಸದಸ್ಯ ಮದನಕುಮಾರ್ ಮಾತನಾಡಿದರು. ಘಟಕ ಅಧ್ಯಕ್ಷ ಭರತ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಕಳೆದ 20 ವರ್ಷಗಳ ಅಧ್ಯಕ್ಷರನ್ನು ಗೌರವಿಸಲಾಯಿತು. ವಲಯ ಉಪಾಧ್ಯಕ್ಷೆ ಅಶ್ವಿನಿ ಐತಾಳ್, ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸಿಇಒ ವಿಷ್ಣು ಆರ್.ಪೈ, ನಿಕಟಪೂರ್ವಾಧ್ಯಕ್ಷ ಮಂಜುನಾಥ ದೇವಾಡಿಗ, ಮಹಿಳಾ ಜೇಸಿ ಅಧ್ಯಕ್ಷೆ ಶ್ರೀಲತಾ, ಜೆಜೆಸಿ ಅಧ್ಯಕ್ಷೆ ಹರ್ಷಾ ಇದ್ದರು. ಕಾರ್ಯದರ್ಶಿ ಅಭಿಷೇಕ್ ವಂದಿಸಿದರು.