ಸುಣಧೋಳಿ ಸೇತುವೆ ಜಲಾವತಗೊಂಡು ಸಂಚಾರ ಸ್ಥಗಿತವಾಗಿರುವುದು. 
ಜಿಲ್ಲೆ

ನಾಲ್ಕು ಸೇತುವೆ ಮುಳುಗಡೆ, ಸಂಚಾರ ಸ್ಥಗಿತ

ಶಂಕರ ಗೆಜ್ಜಿ

ಮೂಡಲಗಿ: ಪಶ್ಚಿಮಘಟ್ಟ ಹಾಗೂ ಜಿಲ್ಲೆಯಲ್ಲಿ ನಿರಂತರ ಸುರಿಯುವ ಮಳೆಯಿಂದ ತಾಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚಾಗಿದರಿಂದ ತಾಲೂಕಿನ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗಳು ಶುಕ್ರವಾರ ಜಲಾವತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪುರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ, ಸುಣಧೋಳಿ ಹಾಗೂ ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆ, ಕಮಲದಿನ್ನಿ ಹಾಗೂ ಹುಣಶ್ಯಾಳ ಪಿವೈಗೆ ಸಂಪರ್ಕ ಕಲ್ಪಿಸುವ ಕಮಲದಿನ್ನಿ ಸೇತುವೆಗಳು ಜಲಾವತಗೊಂಡಿವೆ. ಇದರಿಂದ ಈ ಮಾರ್ಗಗಳು ಸಂಪರ್ಕ ಕಡಿತಗೊಂಡಿದೆ.

ಅಧಿಕಾರಿಗಳ ನಿರ್ಲಕ್ಷ್ಯ: ತಾಲೂಕಿನಲ್ಲಿ ಹರಿಯುತ್ತಿರುವ ಘಟಪ್ರಭಾ ನದಿಗೆ ಅಡ್ಡಲಾಗಿ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗಿದೆ. ಸೇತುವೆಗಳ ಸಿಮೆಂಟ್ ಕಂಬಗಳು ಮತ್ತು ಸೇತುವೆಗಳ ಮೇಲಿನ ಕಾಂಕ್ರ್ರಿಟ್ ಪ್ರವಾಹದಿಂದಾಗಿ ಕಿತ್ತುಹೋಗಿ ಗುಂಡಿಗಳು ಬಿದ್ದು ಸುಮಾರು ವರ್ಷ ಕಳೆದರೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಆತಂಕದಲ್ಲಿಯೇ ಜನರು ಸಂಚರಿಸುವಂತಾಗಿದೆ. ತಾಲೂಕಿನ ಬಹುತೇಕ ಗ್ರಾಮಗಳ ರೈತರು ಈ ಸೇತುವೆಗಳನ್ನೇ ಅವಲಂಬಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಪತ್ರಿವರ್ಷ ಮೂರ್ನಾಲ್ಕು ಬಾರಿ ಘಟಪ್ರಭಾ ನದಿಗೆ ಹೆಚ್ಚಿನ ನೀರು ಅಪಾರ ಪ್ರಮಾಣದಲ್ಲಿ ಹರಿದು ಬರುವ ಕಾರಣಕ್ಕೆ ಸಿಮೆಂಟ್ ಕಂಬಗಳು, ಸೇತುವೆಗಳ ಮೇಲಿನ ಕಾಂಕ್ರಿಟ್ ಕಿತ್ತುಹೋಗಿ ಗುಂಡಿಗಳು ಬಿದ್ದಿವೆ. ಈಗ ನೀರಿನ ಮಟ್ಟ ಕಡಿಮೆಯಾದ ಕೂಡಲೇ ಆ ಸೇತುವೆಗಳ ದುರಸ್ತಿ ಮಾಡಲಾಗುವುದು.| ಜೈಭೀಮ ಕಡಿಯವರು, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್, ಗೋಕಾಕ