ಗುಂಡ್ಲುಪೇಟೆ ಹೊರವಲಯದಲ್ಲಿ ಜಖಂಗೊಂಡ ಕಂಟೈನರ್. 
ಜಿಲ್ಲೆ

ನಾಲ್ವರು ಪ್ರಯಾಣಿಕರಿಗೆ ಗಾಯ

ಲೋಕೇಶ್ ಮನು. ಡಿ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿ ಬಸ್‌ಗೆ ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಪಟ್ಟಣದ ನಿಲ್ದಾಣದಿಂದ ಮೈಸೂರಿನತ್ತ ಹೊರಟಿದ್ದ ಬಸ್ಸಿಗೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಕಂಟೈನರ್ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 12 ಜನ ಪ್ರಯಾಣಿಕರಲ್ಲಿ ನಾಲ್ವರಿಗೆ ಸಣ್ಣ ಪುಟ್ಟ ಪೆಟ್ಟುಗಳಾಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು. ಕಂಟೈನರ್ ಚಾಲಕನಿಗೆ ಸಹ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಂಟೈನ ಹಾಗೂ ಬಸ್ ಜಖಂಗೊಂಡಿವೆ.