ಮಂಗಳೂರು : ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಯು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಹಾಸ್ಪಿಟಲ್ಸ್ ಮತ್ತು ಹೆಲ್ತ್‌ಕೇರ್ ಪ್ರೊವೈಡರ್ಸ್ (ಎನ್‌ಎಬಿಎಚ್) ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಮಾನ್ಯತೆ ಪಡೆದಿದೆ. ಬಂಟ್ವಾಳ ತಾಲೂಕಿನಲ್ಲಿ ಈ ಮನ್ನಣೆ ಪಡೆದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಈ ಮಾನ್ಯತೆ ಮಹತ್ವದ ಮೈಲಿಗಲ್ಲು. ಆರೋಗ್ಯ ಸೇವೆಯ ಶ್ರೇಷ್ಠತೆ , ರೋಗಿಗಳ
ಸುರಕ್ಷತೆ ಮತ್ತು ಗುಣಮಟ್ಟದ ಸೇವೆಗೆ ಅಚಲವಾದ ಬದ್ಧತೆಗೆ ಮೀಸಲಾಗಿರುವ ಫಾದರ್ ಮುಲ್ಲರ್ ಆಸ್ಪತ್ರೆ, ತುಂಬೆ ನಿರಂತರವಾಗಿ
ವಿಕಸನಗೊಳ್ಳುತ್ತಿರುವ ಆರೋಗ್ಯ ರಕ್ಷಣೆಯ ಮಾನದಂಡವನ್ನು ಸ್ಥಾಪಿಸಿದೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿ 2013ರಲ್ಲಿ ಸ್ಥಾಪನೆಯಾದ ಆಸ್ಪತ್ರೆಯು 100 ಹಾಸಿಗೆಗಳ ಸಾಮರ್ಥ್ಯ ಹೊಂದಿದೆ .
ಬಂಟ್ವಾಳ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳ ಗ್ರಾಮೀಣ ಸಮುದಾಯಗಳಿಗೆ ಸೇವೆ ಸಲ್ಲಿಸುತ್ತದೆ. 24/7 ಅಪಘಾತ ಸೇವೆಗಳು, ಆಪರೇಷನ್ ಥಿಯೇಟರ್‌ಗಳು, ಡಯಾಲಿಸಿಸ್ ಮತ್ತು ಫಾರ್ಮಸಿ ಸೌಲಭ್ಯಗಳನ್ನು ಒಳಗೊಂಡಂತೆ ಅತ್ಯಾಧುನಿಕ
ಸೌಲಭ್ಯಗಳನ್ನು ಹೊಂದಿದೆ . ವೈದ್ಯರು, ದಾದಿಯರು ಮತ್ತು ಸಹಾಯಕ ಸಿಬ್ಬಂದಿ ಒಳಗೊಂಡಿರುವ ಆರೋಗ್ಯ ವೃತ್ತಿಪರರ
ಅತ್ಯಂತ ಸಮರ್ಪಿತ ತಂಡವನ್ನು ಹೊಂದಿದೆ.
ಈ ಮಾನ್ಯತೆಯೊಂದಿಗೆ, ಫಾದರ್ ಮುಲ್ಲರ್ ಆಸ್ಪತ್ರೆ, ತುಂಬೆ ತನ್ನ ಸ್ಥಾಪಕರಾದ ಫಾದರ್ ಅಗಸ್ಟಸ್ ಮುಲ್ಲರ್ ಅವರ
‘ಗುಣಪಡಿಸಿ ಮತ್ತು ಸಾಂತ್ವನಗೊಳಿಸಿ ‘ಎಂಬ ಧ್ಯೇಯವಾಕ್ಯವನ್ನು ಪ್ರತಿಧ್ವನಿಸಿದೆಎ ಅಪ್ರತಿಮ ಗುಣಮಟ್ಟದ ಆರೋಗ್ಯ
ಸೇವೆಗಳನ್ನು ನೀಡುವ ತನ್ನ ಬದ್ಧತೆಯನ್ನು ಸಾಕಾರಗೊಳಿಸಿದೆ ಎಂದು ಪ್ರಕಟಣೆ ತಿಳಿಸಿದೆ.