ಮೈಸೂರು: ಸೈಟ್ ಮತ್ತು ಜಮೀನುಗಳ ನಕಲಿ ದಾಖಲೆ ಸೃಷ್ಟಿಸಿ ಜನರಿಗೆ ಮೋಸ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸುತ್ತಿದ್ದ ದಾಖಲಾತಿಗಳು, ಸೀಲುಗಳು, ಲ್ಯಾಪ್‌ಟಾಪ್, ಪ್ರಿಂಟರ್, ಸ್ಕಾೃನರ್ ಮತ್ತು ಮೊಬೈಲ್‌ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಕುವೆಂಪುನಗರದ ಸರ್ವಿಸ್ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮೂವರು ಆರೋಪಿಗಳು ಸೈಟ್ ಮತ್ತು ಜಮೀನುಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸೆ.5 ರಂದು ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಡಿಸಿಪಿ ಪ್ರದೀಪ್ ಗುಂಟಿ, ಕೃಷ್ಣರಾಜ ವಿಭಾಗದ ಎಸಿಪಿ ಗಂಗಾಧರಸ್ವಾಮಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕುವೆಂಪುನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಷಣ್ಮುಗ ವರ್ಮ, ಸಬ್ ಇನ್ಸ್‌ಪೆಕ್ಟರ್‌ಗಳಾದ ಎಂ. ರಾಧಾ, ಗೋಪಾಲ್, ಪ್ರಭು, ಎಎಸ್‌ಐ ಮುರಳೀಗೌಡ ಸಿಬ್ಬಂದಿ ಪುರುಷೋತ್ತಮ್, ಕೃಷ್ಣ, ಮಂಜುನಾಥ್, ರಾಜುಸಾಬ್, ಮೌನೇಶ, ಅಮೋಘ್, ಎನ್.ಕೆ. ಪುಟ್ಟಪ್ಪ, ಹಜರತ್ ಅಲಿ, ಮಹೇಶ್, ಯೋಗೇಶ ಪಾಲ್ಗೊಂಡಿದ್ದರು. ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.