ಜಿಲ್ಲೆ

ನೌಕರಿ ಕೊಡಿಸುವುದಾಗಿ ವಂಚನೆ

ಮರಿದೇವ ಹೂಗಾರ

ಹುಬ್ಬಳ್ಳಿ: ನೌಕರಿ ಕೊಡಿಸುವುದಾಗಿ ನಂಬಿಸಿ ವಿವಿಧ ಚಾರ್ಜ್ ಹೆಸರಿನಲ್ಲಿ ನಗರದ ಮಹಿಳೆಯೊಬ್ಬರಿಂದ 1.11 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಮಹಿಳೆಯು ಇನ್‌ಸ್ಟಾಗ್ರಾಮ್‌ನಲ್ಲಿ ಜಾಬ್ ಪೋಸ್ಟ್ ನೋಡಿ ಅದಕ್ಕೆ ಕರೆ ಮಾಡಿದಾಗ ಹರ್ಷಿತ ಸಾಯಿ ಎಂಬುವರು ನೌಕರಿ ಕೊಡಿಸುವುದಾಗಿ ನಂಬಿಸಿ ಆನ್‌ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಗೋಕುಲರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.