ಜಿಲ್ಲೆ

ಶ್ರವಣ, ಮಾತು ಪರಿಶೀಲನಾ ಉಚಿತ ಶಿಬಿರ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ ಧಾರವಾಡ ಸಹಯೋಗದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ.ಹೆಗ್ಗಡೆ ಹಾಗೂ ಡಿ.ಹರ್ಷೇಂದ್ರ ಕುಮಾರ್ ನಿರ್ದೇಶನದಂತೆ ಅ.4 ಮತ್ತು 5ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಶ್ರವಣ ಮತ್ತು ಮಾತು ಪರಿಶೀಲನಾ ಉಚಿತ ಶಿಬಿರ ನಡೆಯಲಿದೆ.

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ರೋಹನ್ ಎಂ.ದೀಕ್ಷಿತ್, ಧಾರವಾಡದ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ತಜ್ಞ ಡಾ.ವಸೀಮ್ ಇವರಿಂದ ಎಲ್ಲ ವಯಸ್ಸಿನ ಜನರಿಗೆ ಮಾತು, ಭಾಷೆ ಮತ್ತು ಶ್ರವಣ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು.

ಈ ಶಿಬಿರದಲ್ಲಿ ಎ.ಡಿ.ಐ.ಪಿ ಯೋಜನೆಯಡಿ ಶ್ರವಣ ಉಪಕರಣಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮರ್ಗದರ್ಶನ ನೀಡಲಾಗುವುದು. ಮಾಹಿತಿಗಾಗಿ 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.