ಜಿಲ್ಲೆ

ಜ್ಞಾನ ಬುತ್ತಿ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಮೈಸೂರು: ನಗರದ ಜ್ಞಾನ ಬುತ್ತಿ ಸಂಸ್ಥೆಯಿಂದ ಪಿಡಿಒ, ಎಫ್‌ಡಿ ಎ, ಎಸ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.
ಆಸಕ್ತರು ಲಕ್ಷ್ಮೀಪುರಂನ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನಬುತ್ತಿ ಸಂಸ್ಥೆಗೆ ಡಿ.23ರೊಳಗೆ ಸಂಜೆ 5.30ರಿಂದ 7.30ರವರೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಕಾರ್ಯದರ್ಶಿ ಎಚ್.ಬಾಲಕೃಷ್ಣ (ಮೊ: 94481 17455) ಅವರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜೈನಹಳ್ಳಿ ಸತ್ಯನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.