ಜಿಲ್ಲೆ

ನೇತ್ರ ರೋಗಕ್ಕೆ ಉಚಿತ ಚಿಕಿತ್ಸಾ ಶಿಬಿರ

ಮರಿದೇವ ಹೂಗಾರ

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಸಂಜೀವಿನಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಡಿ. 18ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ವಿವಿಧ ನೇತ್ರ ರೋಗಗಳಿಗೆ ಉಚಿತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ.

ಬೆಂಗಳೂರಿನ ಶ್ರೀ ಶ್ರೀ ಆಯುರ್ವೇದ ಮಹಾವಿದ್ಯಾಲಯದ ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ನವೀನ ಬಿ.ಎಸ್. ಅವರು ಪರೀಕ್ಷಿಸಿ, ಚಿಕಿತ್ಸೆ ಹಾಗೂ ಸಲಹೆ ನೀಡುವರು ಎಂದು ಪ್ರಾಚಾರ್ಯ ಡಾ.ಸಿ.ಸಿ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.