ಜಿಲ್ಲೆ

ಉಚಿತ ನೇತ್ರ ತಪಾಸಣೆ ಶಿಬಿರ

ಮರಿದೇವ ಹೂಗಾರ

ಹುಬ್ಬಳ್ಳಿ: ಇಲ್ಲಿಯ ಕೊಯಿನ್ ರಸ್ತೆಯ ದಿ ಹುಬ್ಬಳ್ಳಿ ಕೋ -ಆಪರೇಟಿವ್ ಆಸ್ಪತ್ರೆಯಲ್ಲಿ ಕೆಎಲ್ಇಜೆಜಿಎಂಎಂ ಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಆ. 4ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಉಚಿತ ನೇತ್ರ ತಪಾಸಣೆ ಶಿಬಿರ ಏರ್ಪಾಟಾಗಿದೆ.

ತಪಾಸಣೆ ನಂತರ ಬಿಪಿಎಲ್ ಕಾರ್ಡ್ ಹೊಂದಿದ ಅರ್ಹರಿಗೆ ಮಾತ್ರ ಉಚಿತವಾಗಿ ಕನ್ನಡಕಗಳನ್ನು ನೀಡಲಾಗುವುದು ಎಂದು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಲಿಂಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.