ಡಾ.ಮಹೇಂದ್ರಸಿಂಗ್ ಕಾಳಪ್ಪ  
ಜಿಲ್ಲೆ

ಬನ್ನೂರಿನಲ್ಲಿ 4ರಂದು ಕಣ್ಣಿನ ಉಚಿತ ತಪಾಸಣಾ ಶಿಬಿರ

ಬನ್ನೂರು: ಪಟ್ಟಣದ ಬಸ್ ನಿಲ್ದಾಣ ಸಮೀಪವಿರುವ ರೋಟರಿ ಶಾಲೆ ಆವರಣದಲ್ಲಿ ಜ.4ರಂದು ಮಧ್ಯಾಹ್ನ 1 ರಿಂದ 4 ಗಂಟೆವರೆಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಮಾಜಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ತಿಳಿಸಿದ್ದಾರೆ.

ತಪಾಸಣೆಗೆ ಬರುವವರು ಆಧಾರ್‌ಕಾರ್ಡ್ ಜೆರಾಕ್ಸ್ ಪ್ರತಿ, ಮೊಬೈಲ್ ನಂಬರ್ ಕೊಡವುದು ಕಡ್ಡಾಯ. ಕಣ್ಣಿನ ಪೊರೆ, ಗ್ಲಾಕೋಮ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಬರುವುದು, ಹತ್ತಿರ ಮತ್ತು ದೂರ ದೃಷ್ಟಿ ದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆ ಕಣ್ಣು, ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಣ್ಣಿನ ಪೊರೆ ಇರುವವರನ್ನು ಕೊಯಮತ್ತೂರು ಕಣ್ಣಿನ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ, ಶಸ್ತ್ರ ಚಿಕಿತ್ಸೆ ಮಾಡಿಸಿ ಪುನಃ ಸ್ವಸ್ಥಳಕ್ಕೆ ತಂದು ಬಿಡಲಾಗುವುದು ಎಂದು ತಿಳಿಸಿದ್ದಾರೆ.