ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಜುಲೈ 5 ರಂದು ಶನಿವಾರ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆಯ ತಜ್ಞ ವೈದ್ಯರಿಂದ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಅನುಗ್ರಹ ಫೌಂಡೇಶನ್, ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ನಂ.1 ಕನ್ನಡ ದಿನಪತ್ರಿಕೆ ಸಹಯೋಗದಲ್ಲಿ ಆಯೋಜಿಸಿರುವ ಶಿಬಿರ ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ಇದರಲ್ಲಿ ಕಣ್ಣಿನ ಸಮಸ್ಯೆಗಳಾದ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಗೀಜು ಬರುವುದು, ಹತ್ತಿರ ಮತ್ತು ದೂರದೃಷ್ಟಿ ದೋಷ, ವಾರೆಕಣ್ಣು, ರಾತ್ರಿ ಕುರುಡುತನ ಇವುಗಳ ಬಗ್ಗೆ ತಪಾಸಣೆ ನಡೆಸಲಾಗುವುದು. ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ಕೊಡಲಾಗುವುದು. ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಆದ್ದರಿಂದ ಕಣ್ಣಿನ ತೊಂದರೆಯಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ವಿವರಗಳಿಗೆ ಮೊ: 9481820814, 8971872924, 8884147744 ಸಂಪರ್ಕಿಸುವಂತೆ ಕೋರಲಾಗಿದೆ.