ಬೆಂಗಳೂರು: ಕಣ್ಣಿನ ಪೊರೆ ಜಾಗೃತಿ ಮಾಸ ಆಚರಣೆ ಅಂಗವಾಗಿ ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆಯು ತನ್ನ ಎಲ್ಲಾ 11 ಶಾಖೆಗಳಲ್ಲೂ ಮತ್ತು ಕ್ಲಿನಿಕ್‌ಗಳಲ್ಲಿ ಜೂ. 30ರವರೆಗೆ ನಗರದ 50 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ತಪಾಸಣೆ ಹಮ್ಮಿಕೊಂಡಿದೆ.
ಈ ಕುರಿತು ಆಸ್ಪತ್ರೆಯ ಕ್ಲಿನಿಕಲ್ ಸೇವೆಗಳ ಪ್ರಾದೇಶಿಕ ಮುಖ್ಯಸ್ಥ ಡಾ. ರವಿ ದೊರೈರಾಜ್ ಮಾತನಾಡಿ. ವಯಸ್ಸಾದವರಲ್ಲಿ ಕಂಡು ಬರುವ ಕಣ್ಣಿನ ಸಮಸ್ಯೆಗೆ ಪರಿಹಾರ ಒದಗಿಸುವ ಹಾಗೂ ಕಣ್ಣಿನ ಆರೋಗ್ಯ ರಕ್ಷಣೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ 50 ವರ್ಷ ಮೇಲ್ಪಟ್ಟವರಿಗೆ ತಪಾಸಣೆ ನಡೆಸುತ್ತಿದ್ದು, ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.
ತಪಾಸಣೆಗಾಗಿ ಮೊ: 9594029222 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸುವಂತೆ ತಿಳಿಸಿದ್ದಾರೆ.